ಮಲ್ಪೆ ಬೀಚ್‌ 
ರಾಜ್ಯ

ಉಡುಪಿ: ಮಲ್ಪೆ ಬೀಚ್‌ನಲ್ಲಿ ಜೀವರಕ್ಷಕನ ಮೇಲೆ ಪ್ರವಾಸಿಗರಿಂದ ಹಲ್ಲೆ; ಪರಾರಿ

ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಲೈಫ್‌ಗಾರ್ಡ್‌ ಪದೇ ಪದೆ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ ಪ್ರವಾಸಿಗರು ಈಜುವುದನ್ನು ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಉಡುಪಿ: ಬೀಚ್‌ನಲ್ಲಿ ನಿಯೋಜನೆಗೊಂಡಿದ್ದ ಜೀವರಕ್ಷಕ ದಳದ ಸಿಬ್ಬಂದಿ ಮೇಲೆ ಆರು ಮಂದಿ ಪ್ರವಾಸಿಗರ ತಂಡವೊಂದು ಗುರುವಾರ ಹಲ್ಲೆ ನಡೆಸಿರುವ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ. ಸಮುದ್ರದ ಪ್ರಕ್ಷುಬ್ಧತೆಯ ಬಗ್ಗೆ ಲೈಫ್‌ಗಾರ್ಡ್‌ ಪದೇ ಪದೆ ಎಚ್ಚರಿಕೆ ನೀಡಿದರೂ, ಅದನ್ನು ನಿರ್ಲಕ್ಷಿಸಿ ಪ್ರವಾಸಿಗರು ಈಜುವುದನ್ನು ಮುಂದುವರಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಉದ್ಯಾವರ-ಪಿತ್ರೋಡಿಯ ಜೀವರಕ್ಷಕ ತೇಜ ಕೋಟ್ಯಾನ್ ಅವರು ಅಪಾಯಕಾರಿ ಅಲೆಗಳ ಬಗ್ಗೆ ಪ್ರವಾಸಿಗರಿಗೆ ತಿಳಿಸಿದರೂ, ಗುಂಪು ಅದನ್ನು ನಿರ್ಲಕ್ಷಿಸಿ ಅಪಾಯದ ವಲಯದಲ್ಲಿ ಈಜಲು ಹೋಗಿದೆ. ಕೋಟ್ಯಾನ್ ಅವರು ಈಜುವುದನ್ನು ಮುಂದುವರಿಸಬೇಡಿ ಎಂದು ಕೇಳಿದಾಗ, ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ.

ಸ್ಥಳದಲ್ಲಿದ್ದ ಇತರ ಜೀವರಕ್ಷಕರು ಮತ್ತು ಗೃಹರಕ್ಷಕರು ದಾಳಿಕೋರರನ್ನು ಹಿಡಿಯಲು ಪ್ರಯತ್ನಿಸಿದರು. ಆದರೆ ಕೆಎ 04 ಎಡಿ 8286 ನೋಂದಣಿ ಸಂಖ್ಯೆಯ ಸ್ವಿಫ್ಟ್ ಮಾರುತಿ ಕಾರಿನಲ್ಲಿ ಅವರು ಪರಾರಿಯಾಗಿದ್ದಾರೆ. ಘಟನೆ ಕುರಿತು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!