ದೇವರಾಜೇಗೌಡ 
ರಾಜ್ಯ

ಪ್ರಜ್ವಲ್ ರೇವಣ್ಣ ಕೇಸ್ ಹೊರಗೆ ತಂದ ವಕೀಲ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲು!

ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ನ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದ ಹಾಸನದ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುನ್ನ ಕೇಂದ್ರದ ಬಿಜೆಪಿ ನಾಯಕರಿಗೆ ಪತ್ರ ಬರೆದಿದ್ದ ಹಾಸನದ ಬಿಜೆಪಿ ಮುಖಂಡ ಜಿ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ವಕೀಲರಾಗಿರುವ ದೇವರಾಜೇಗೌಡ ಅವರ ವಿರುದ್ಧ ಏಪ್ರಿಲ್ 1 ರಂದು ಎಫ್‌ಐಆರ್ ದಾಖಲಾಗಿತ್ತು. ಆದರೆ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅವರು ಪ್ರಮುಖ ಮಾಹಿತಿದಾರರಾದ್ದರಿಂದ ಅದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ಅವರು ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕಳೆದ ವರ್ಷ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದ ದೇವರಾಜೇಗೌಡರು, ಹಾಸನದಿಂದ ಜೆಡಿಎಸ್ ಸಂಸದರಿಗೆ ಲೋಕಸಭೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

2023 ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಮತ್ತು ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿದ್ದ ದೇವರಾಜೇಗೌಡ, ಲೈಂಗಿಕ ಕಿರುಕುಳದ ವೀಡಿಯೊಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯದ ಕಾಂಗ್ರೆಸ್ ನಾಯಕರನ್ನು ದೂಷಿಸಿದ್ದರು.

ಹಾಸನ ಜಿಲ್ಲೆಯ 36 ವರ್ಷದ ಮಹಿಳೆಯೊಬ್ಬರು ತಮ್ಮ ಆಸ್ತಿ ಮಾರಾಟಕ್ಕೆ ಸಹಾಯ ಮಾಡುವ ನೆಪದಲ್ಲಿ ದೇವರಾಜೇಗೌಡ ತನಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಹೆದರಿಸಿ ಬೆದರಿಸಿ ತನ್ನ ಮೇಲೆ ದೌರ್ಜನ್ಯ ನಡೆಸಲಾಗಿದೆ. ವೀಡಿಯೋ ಕಾಲ್ ಮಾಡಿ ಮಾನಸಿಕ ಹಿಂಸೆ ನೀಡಿದ್ದಾರೆ. ವೀಡಿಯೋ ಕಾಲ್ ಮಾಡಿ ತನ್ನ ಖಾಸಗಿ ಅಂಗಾಂಗ ತೋರಿಸಿ ಪ್ರಚೋದನೆಗೆ ಯತ್ನಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಮಹಿಳೆ‌ ದೂರು ಆಧರಿಸಿ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಪ್ರತಿಕ್ರಿಯೆಗೆ ಬಿಜೆಪಿ ನಾಯಕರು ಲಭ್ಯವಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!