ಅಪಘಾತಕ್ಕಿಡಾದ ಕ್ರೂಸರ್ 
ರಾಜ್ಯ

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ಪಲ್ಟಿ, ಮೂವರು ಮಹಿಳೆಯರು ಸಾವು

ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.

ಬೆಳಗಾವಿ: ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ನಡೆದಿದೆ.

ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದಾಗ ಜತ್ತ ಬಳಿ ಕ್ರೂಸರ್​​​ ಟೈರ್ ಬ್ಲಾಸ್ಟ್​ ಆಗಿ ಈ ಅಪಘಾತ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡ್ಡಮನಿ ಹಾಗೂ ಕಸ್ತೂರಿ ಎಂದು ಗುರುತಿಸಲಾಗಿದೆ.

ಬಳ್ಳಿಗೇರಿ ಗ್ರಾಮದಲ್ಲಿ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಟಿಬೆಟ್‌ನಲ್ಲಿ ಪ್ರಬಲ ಭೂಕಂಪ: ನೂರಾರು ಮನೆಗಳು ಧರಾಶಾಹಿ; ಕನಿಷ್ಟ 16 ಮಂದಿ ಸಾವು, 54ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ..!

ಇಸ್ರೋದ ಉಪಗ್ರಹ ಉಡಾವಣೆ ವೈಫಲ್ಯಕ್ಕಿಂತ ಕಾಂಗ್ರೆಸ್ ನಾಯಕನ ರೀ ಲಾಂಚ್ ಫೈಲ್ಯೂರ್ ಹೆಚ್ಚಾಗಿದೆ : ಪ್ರಧಾನಿ ಮೋದಿ ವ್ಯಂಗ್ಯ; Video

Namma Metro ಪ್ರಯಾಣಿಕರಿಗೆ Good News: ಮುಂದಿನ 4-5 ದಿನಗಳಲ್ಲಿ Pink Line ಮೆಟ್ರೋ ಸಂಚಾರಕ್ಕೆ ಅನುಮತಿ ಸಾಧ್ಯತೆ..!

ಇಸ್ರೇಲ್ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಪ್ರಧಾನಿ ಮೋದಿ, ಸ್ಮಿತ್‌ ಮಚ್ಚಾರ್‌ಗೆ ನೆತನ್ಯಾಹು ಆಹ್ವಾನ!

ನೇಪಾಳದ ಭೀಕರ ಪ್ರವಾಹ ಮಾಸುವ ಮುನ್ನವೇ ಟಿಬೆಟ್​ನಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ: 2 ಬಾರಿ ಕಂಪಿಸಿದ ಭೂಮಿ!