ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ತೃತೀಯ ಲಿಂಗಿಯನ್ನು ಕೊಂದ ಮಹಿಳೆ ಬಂಧನ

ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತೃತೀಯಲಿಂಗಿಯ ಕತ್ತು ಹಿಸುಕಿ ಕೊಂದ 51 ವರ್ಷದ ಮಹಿಳೆಯನ್ನು ಜೀವನ್ ಬೀಮಾ ನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದ ಹಿನ್ನೆಲೆಯಲ್ಲಿ ತೃತೀಯಲಿಂಗಿಯ ಕತ್ತು ಹಿಸುಕಿ ಕೊಂದ 51 ವರ್ಷದ ಮಹಿಳೆಯನ್ನು ಜೀವನ್ ಬೀಮಾ ನಗರ ಪೊಲೀಸರು ಬಂಧಿಸಿದ್ದಾರೆ.

ಹಳೆ ವಿಮಾನ ನಿಲ್ದಾಣ ರಸ್ತೆಯ ಮುರುಗೇಶಪಾಳ್ಯದಲ್ಲಿ ಮೇ ಮೊದಲ ವಾರದಲ್ಲಿ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ಮೂಲದ ಪ್ರೇಮಾ ಮುರುಗೇಶಪಾಳ್ಯದಲ್ಲಿ ವಾಸಿಸುತ್ತಿದ್ದರು. ಪ್ರೇಮಾ ಮನೆಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಮುರುಗೇಶಪಾಳ್ಯ ನಿವಾಸಿ ಮಂಗಿ ನಾಯ್ಕ ಅಲಿಯಾಸ್ ಮಂಗಿ ಭಾಯಿ (42) ಕೊಲೆಯಾದ ಮಹಿಳೆ.

ಪ್ರೇಮಾ 20 ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡು ಮಂಗಿಯೊಂದಿಗೆ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹಣಕಾಸಿನ ವಿಚಾರದಲ್ಲಿ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಮೇ 1 ಮತ್ತು 3 ರ ನಡುವೆ ಪ್ರೇಮಾ ಮತ್ತು ಮಂಗಿ ನಡುವೆ ತೀವ್ರ ಜಗಳ ನಡೆದಿತ್ತು, ಈ ವೇಳೆ ಪ್ರೇಮಾಳನ್ನು ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಮಂಗಿಯನ್ನು ಪ್ರೇಮಾ ಟವೆಲ್‌ನಿಂದ ಕತ್ತು ಹಿಸುಕಿ ಕೊಲೆಗೈದು ಪರಾರಿಯಾಗಿದ್ದಳು ಎನ್ನಲಾಗಿದೆ.

ಮಂಗಿ ಕರೆಗಳಿಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಆಕೆಯ ಸಹಚರರು ಅನುಮಾನಗೊಂಡಿದ್ದಾರೆ. ನಂತರ ಪೊಲೀಸರಿಗೆ ಕರೆ ಮಾಡಿದ್ದಾರೆ. ಮೇ 3 ರಂದು ಮನೆಯಲ್ಲಿ ಆಕೆಯ ಕೊಳೆತ ಶವ ಪತ್ತೆಯಾಗಿದೆ.

ಆರಂಭದಲ್ಲಿ ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಕತ್ತಿನ ಮೂಳೆಯಲ್ಲಿ ಹೆಚ್ಚಿನ ಒತ್ತಡದಿಂದ ಮಂಗಿ ಸಾವನ್ನಪ್ಪಿದ್ದಾಳೆ ಎಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿದೆ. ಪೊಲೀಸರು ಅಕ್ಕಪಕ್ಕದ ಮನೆಯವರನ್ನು ವಿಚಾರಿಸಿದ್ದು, ಪ್ರೇಮಾಳನ್ನು ಶಂಕಿಸಿದ್ದಾರೆ. ಮೇ 8 ರಂದು ಪೊಲೀಸರು ಪ್ರೇಮಾಳನ್ನು ಕೊಲೆಯ ಆರೋಪದ ಮೇಲೆ ಆಕೆಯ ಗ್ರಾಮದಿಂದ ಬಂಧಿಸಿ ಕರೆತಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!