ಶ್ರೀನಿವಾಸ್ ಪ್ರಸಾದ್ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜ್ಯ

ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ: ಸಿಎಂ ಸಿದ್ದರಾಮಯ್ಯ

ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಮೈಸೂರು: ಶ್ರೀನಿವಾಸ್ ಪ್ರಸಾದ್ ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಶ್ರೀನಿವಾಸ್ ಪ್ರಸಾದ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಸಂವಿಧಾನದ ಆಶಯಗಳನ್ನು ಪಾಲಿಸಿಕೊಂಡು ಬಂದಿದ್ದ ಶ್ರೀನಿವಾಸ್ ಪ್ರಸಾದ್ ಅವರು ಎಂದೂ ಗುಲಾಮಗಿರಿಗೆ ಬಲಿಯಾಗಿರಲಿಲ್ಲ. ಸಾಮಾಜಿಕ ನ್ಯಾಯದ ಪರ ಹೋರಾಟ ಮಾಡಿದವರು. ಹಳೆಯ ತಲೆಮಾರಿನ ಈ ರಾಜಕೀಯ ಮುತ್ಸದ್ದಿಯ ನಿಧನದಿಂದ ಬಹುದೊಡ್ಡ ರಾಜಕೀಯ ಕೊಂಡಿ ಕಳಚಿದಂತಾಗಿದೆ. ಅವರ ವಿಚಾರಧಾರೆಗಳು ಇಂದಿನ ಯುವಜನರಿಗೆ ಆದರ್ಶವಾಗಲಿ ಎಂದು ಹಾರೈಸಿದರು.

ಬೇರೆ ಪಕ್ಷಗಳಲ್ಲಿದ್ದರೂ ನನ್ನ ಹಾಗೂ ಶ್ರೀನಿವಾಸ್ ಪ್ರಸಾದ್‌ರ ನಡುವೆ ಉತ್ತಮ ಸ್ನೇಹ ಬಾಂಧವ್ಯ ಹಾಗೂ ಒಡನಾಡವಿತ್ತು. ಪರಸ್ಪರ ರಾಜಕೀಯ ವೈರುಧ್ಯಗಳಿದ್ದರೂ ನಮ್ಮ ಸ್ನೇಹಕ್ಕೆ ಎಂದೂ ಧಕ್ಕೆ ಬಂದಿರಲಿಲ್ಲ. ಬುದ್ಧ, ಬಸವಣ್ಣ, ಗಾಂಧೀಜಿಯವರ ವಿಚಾರಧಾರೆಗಳನ್ನು ನಂಬಿ ನಡೆಯುವವರು ಬದುಕಿನುದ್ದಕ್ಕೂ ಮನುಷ್ಯತ್ವವನ್ನು ಪಾಲಿಸುವವರಾಗಿರುತ್ತಾರೆ. ಮನುಷ್ಯ ಮನುಷ್ಯನನ್ನು ಪರಸ್ಪರ ಗೌರವಿಸಬೇಕೇ ಹೊರತು ದ್ವೇಷಿಸಬಾರದು. ರಾಜಕೀಯ ವೈರುಧ್ಯಗಳಿಂದಾಗಿ ಪರಸ್ಪರ ಟೀಕಿಸುವುದು ಸ್ವಾಭಾವಿಕವಾಗಿದ್ದರೂ, ನಮ್ಮ ಸ್ನೇಹಕ್ಕೆಂದೂ ಧಕ್ಕೆ ಬಂದಿಲ್ಲ ಎಂದು ತಿಳಿಸಿದರು.

ಇತ್ತೀಚೆಗೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯ ನಿವೃತ್ತಿ ಪಡೆದ ನಂತರ, ಕೆಲವು ಶಾಸಕಮಿತ್ರರೊಂದಿಗೆ ಅವರನ್ನು ಭೇಟಿ ಮಾಡಿದ್ದೆ. ಅವರೊಂದಿಗಿನ ಅರ್ಧ ಗಂಟೆಯ ಭೇಟಿಯಲ್ಲಿ ನಮ್ಮ ಹಿಂದಿನ ಸ್ನೇಹ ಮರುಕಳಿಸಿತ್ತು. ನಮ್ಮ ನಡುವೆ ಯಾವುದೇ ರಾಜಕೀಯ ಮಾತುಕತೆ ನಡೆಯಲಿಲ್ಲ. ಆದರೆ ಶ್ರೀನಿವಾಸ್ ಪ್ರಸಾದ್ ಅವರು ರಾಜಕೀಯದ ಕೊನೆ ದಿನಗಳಲ್ಲಿ ನನ್ನ ಸ್ವಾಭಿಮಾನಕ್ಕೆ ಧಕ್ಕೆ ಬಂದಿತ್ತು ಎಂದು ಹೇಳಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಸಂಸದ ಪ್ರತಾಪ್ ಸಿಂಹ ಮತ್ತಿತರರು ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT