ಹುಬ್ಬಳ್ಳಿಯಲ್ಲಿ ಬಸವ ಜಯಂತಿ ಅಂಗವಾಗಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಸವೇಶ್ವರ ದೇವರಿಗೆ ಪೂಜೆ ಸಲ್ಲಿಸಿದರು. 
ರಾಜ್ಯ

ದೇಶಾದ್ಯಂತ ಹಿಂದೂ ಜನಸಂಖ್ಯೆ ಕಡಿಮೆಯಾಗುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಳವಳ

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಹರಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ: ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾಗುತ್ತಿರುವ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಹರಿಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಧಾರ್ಮಿಕ ಅಲ್ಪಸಂಖ್ಯಾತರ ಪಾಲು - ದೇಶಾದ್ಯಂತ ವಿಶ್ಲೇಷಣೆ’ ಕುರಿತು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯ ಇತ್ತೀಚಿನ ವರದಿಯನ್ನು ಉಲ್ಲೇಖಿಸಿದ ಅವರು, ಹಿಂದೂ ಜನಸಂಖ್ಯೆಯ ಕುಸಿತದ ಬಗ್ಗೆ ತಕ್ಷಣದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದಿಲ್ಲ, ಆದರೆ ಸಮಗ್ರ ಅಧ್ಯಯನ ನಡೆಸಬೇಕು ಎಂದು ಹೇಳಿದರು.

ಹಿಂದೂ ಜನಸಂಖ್ಯೆಯಲ್ಲಿ ಮತ್ತಷ್ಟು ಕುಸಿತವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬದಲಾಯಿಸಬಹುದು ಭಾರತದ ಜಾತ್ಯತೀತ ತಳಪಾಯಕ್ಕೆ ಅಪಾಯಕಾರಿ ಕೂಡ ಆಗಬಹುದು. ಭಾರತೀಯರ ರಕ್ತ ಮತ್ತು ಸ್ವಭಾವದಲ್ಲಿರುವಂತೆ ಅದರ ನಿಜವಾದ ಅರ್ಥದಲ್ಲಿ ವಿಶ್ವದ ಏಕೈಕ ಜಾತ್ಯತೀತ ರಾಷ್ಟ್ರವಾಗಿದೆ. ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿರುವ ಬಗ್ಗೆ ಸರ್ಕಾರ ಮತ್ತು ಸಮಾಜ ಚಿಂತಿಸಬೇಕು ಎಂದು ಹೇಳಿದರು.

ಜನಾಂಗದ ಮೇಲೆ ದೇಶವನ್ನು ವಿಭಜಿಸಲು ಕಾಂಗ್ರೆಸ್ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ರಾಹುಲ್ ಗಾಂಧಿಯವರ ಸಿದ್ಧಾಂತವಾದಿ ಸ್ಯಾಮ್ ಪಿತ್ರೋಡಾ ಮಾಡಿದ ಹೇಳಿಕೆಗಳು ಆಕ್ಷೇಪಾರ್ಹವಾಗಿದೆ. ಇದು ಕಾಂಗ್ರೆಸ್ ಪಕ್ಷದ ಸ್ವರೂಪವನ್ನು ಬಹಿರಂಗಪಡಿಸುತ್ತವೆ. ಕೆಲವು ಕಾಂಗ್ರೆಸ್ ನಾಯಕರು ಉತ್ತರ ಭಾರತವನ್ನು ದಕ್ಷಿಣ ಭಾರತದ ವಿರುದ್ಧ ಎತ್ತಿಕಟ್ಟಲು ಮತ್ತು ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಕೂಡ ಹೇಳಿದರು.

ಪಿತ್ರೋಡಾ ಅವರ ಟೀಕೆಗೆ ಸಂಬಂಧಿಸಿದಂತೆ, ಕಾಂಗ್ರೆಸ್ಸಿಗರು ಜನರ ಮೈಬಣ್ಣ ಮತ್ತು ಸಂಸ್ಕೃತಿಯ ಆಧಾರದ ಮೇಲೆ ವಿಭಜನೆಯ ಭಾವನೆಯನ್ನು ಉಂಟುಮಾಡುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT