ವಿದ್ಯಾರ್ಥಿನಿ ಮೀನಾ ಮತ್ತು ಆರೋಪಿ ಪ್ರಕಾಶ್ (ಸಂಗ್ರಹ ಚಿತ್ರ) 
ರಾಜ್ಯ

ಕೊಡಗು: SSLC ವಿದ್ಯಾರ್ಥಿನಿ ಹತ್ಯೆ ಮಾಡಿದ್ದ ಆರೋಪಿ ಪ್ರಕಾಶ್ ಬಂಧನ, ಬಾಲಕಿ ರುಂಡ ಪತ್ತೆ

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಬಳಿಯ ಕುಂಬಾರಗಡಿಗೆ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಡೆದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಎಸ್​ಎಸ್​ಎಲ್​ಸಿ ಫಲಿತಾಂಶ ಹೊರ ಬಿದ್ದ ದಿನವೇ ಬಾಲಕಿಯೊಂದಿಗೆ ನಿಗದಿಯಾಗಿದ್ದ ನಿಶ್ಚಿತಾರ್ಥ ಮುರಿದುಬಿದ್ದ ನಂತರ ಬಾಲಕಿಯ ಮನೆಗೆ ಹೋಗಿ ಪೋಷಕರ ಮೇಲೆ ಹಲ್ಲೆ ಮಾಡಿ ಬಾಲಕಿಯನ್ನು ಎಳೆದಾಡಿ ರುಂಡ ಕತ್ತರಿಸಿ ಎಸ್ಕೇಪ್ ಆಗಿದ್ದ. ಪೊಲೀಸರು ಹಲವು ತಂಡಗಳನ್ನು ಮಾಡಿ ಶೋಧ ಕಾರ್ಯ ನಡೆಸುತ್ತಿದ್ದರು.

ಈ ಹಿಂದೆ, ಆರೋಪಿ ಕೃತ್ಯ ಎಸಗಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ಠಾಣೆಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮಡಿಕೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.

ಬಾಲಕಿಯ ರುಂಡ ಪತ್ತೆ:

ಪ್ರಾಥಮಿಕ ತನಿಖೆಯ ನಂತರ ಆರೋಪಿಯು ಬಾಲಕಿಯ ಕತ್ತರಿಸಿದ ತಲೆಯನ್ನು ಇಟ್ಟುಕೊಂಡಿದ್ದ ಸ್ಥಳಕ್ಕೆ ಪೊಲೀಸರನ್ನು ಕರೆದೊಯ್ದನು.

ಬಾಲಕಿಯನ್ನು ಕೊಂದ ನಂತರ ಘಟನಾ ಸ್ಥಳದಿಂದ 300 ಮೀಟರ್ ದೂರದಲ್ಲಿರುವ ಮಾವಿನ ಮರದ ಕೊಂಬೆಯ ಮೇಲೆ ಮೀನಾಳ ತಲೆಯನ್ನು ಇಟ್ಟಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಪೂರ್ತಿ ಶೋಧ ಕಾರ್ಯಾಚರಣೆ ನಡೆಸಿದ ಶ್ವಾನದಳ ಹಾಗೂ ಪೊಲೀಸ್ ಸಿಬ್ಬಂದಿಗೆ ತುಂಡರಿಸಿದ ತಲೆ ಪತ್ತೆಯಾಗಿರಲಿಲ್ಲ.

ಯಾವುದೇ ದೊಡ್ಡ ಹಾನಿಯಾಗದ ಸ್ಥಿತಿಯಲ್ಲಿ ತುಂಡರಿಸಿದ ತಲೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯೊಂದಿಗಿನ ನಿಶ್ಚಿತಾರ್ಥವನ್ನು ರದ್ದುಗೊಳಿಸಿದ ನಂತರ ನಾನು ಕಂಗಾಲಾಗಿದ್ದೆ. ಕಾಡಿನಲ್ಲಿ ಬಾಲಕಿಯೊಂದಿಗೆ ತೀವ್ರ ವಾಗ್ವಾದಕ್ಕಿಳಿದು ನಂತರ ಕೃತ್ಯ ಎಸಗಿರುವುದಾಗಿ ಆರೋಪಿ ಪೊಲೀಸರ ಬಳಿ ಆರೋಪಿ ಪ್ರಕಾಶ್ ತಪ್ಪೊಪ್ಪಿಕೊಂಡಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT