ಲಿಖಿತ್ ಗೌಡ, ಚೇತನ್ 
ರಾಜ್ಯ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣ: ಆರೋಪಿ ಪಿ.ಲಿಖಿತ್ ಗೌಡ, ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ

ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಿ ಲಿಖಿತ್​ ಗೌಡ ಮತ್ತು ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಭಾನುವಾರ ಆದೇಶ ಹೊರಡಿಸಿದೆ.

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ರಾಸಲೀಲೆ ವಿಡಿಯೋಗಳ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಿ ಲಿಖಿತ್​ ಗೌಡ ಮತ್ತು ಚೇತನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಭಾನುವಾರ ಆದೇಶ ಹೊರಡಿಸಿದೆ.

ಇಂದು ಬೆಳಗ್ಗೆ ಮಾಜಿ ಶಾಸಕ ಪ್ರೀತಂಗೌಡ ಆಪ್ತರಾದ ಪಿ ಲಿಖಿತ್​ ಗೌಡ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್ ಅವರನ್ನು ಬಂಧಿಸಿದ ವಿಶೇಷ ತನಿಖಾ ಅಧಿಕಾರಿಗಳು ವಿಚಾರಣೆ, ಮಹಜರು ಬಳಿಕ ನಗರದ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ಕೋರ್ಟ್ ನ್ಯಾಯಾಧೀಶರು ಆರೋಪಿಗಳಿಗೆ ಮೇ 25ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಗಾಲೇ ಮಾಜಿ ಸಚಿವ ಹೆಚ್. ಡಿ. ರೇವಣ್ಣ, ವಕೀಲ ದೇವರಾಜೇಗೌಡ ಅವರನ್ನು ಬಂಧಿಸಿ ಜೈಲಿಗಟ್ಟಿರುವ ಎಸ್ ಐಟಿ, ಲಿಖಿತ್​ ಗೌಡ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್​​ನನ್ನು ಬಂಧಿಸುವಲ್ಲಿಯೂ ಯಶಸ್ವಿಯಾಗಿದೆ. ಇದೀಗ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ತೀವ್ರಗೊಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್