ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಶನಿವಾರ ಎರಡನೇ ನೋಟಿಸ್ ಜಾರಿ ಮಾಡಿದೆ. ಮೊದಲ ನೋಟಿಸ್ ಗೆ ಉತ್ತರಿಸದ ಹಿನ್ನೆಲೆಯಲ್ಲಿ ಎರಡನೇ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.
ಮಾತ್ರವಲ್ಲದೇ ರೇವಣ್ಣ ಮೇಲೆ ಕೇಳಿ ಬಂದಿರುವ ಅಪಹರಣ ಪ್ರಕರಣದಲ್ಲಿ ಕೇಸ್‌ನಲ್ಲಿ ಕುಮ್ಮಕ್ಕು ಕೊಟ್ಟ ಆರೋಪವನ್ನು ಭವಾನಿ ರೇವಣ್ಣ ಹೊತ್ತಿದ್ದಾರೆ. ಈ ಸಂಬಂಧ ಹಲವಾರು ಪ್ರಶ್ನೆಗಳನ್ನು ಕೇಳಲು ಎಸ್‌ಐಟಿ ತಂಡ ಸಿದ್ಧವಾಗಿದೆ. ಆದರೆ, ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಬಾರಿಯೂ ಭವಾನಿ ರೇವಣ್ಣ ವಿಚಾರಣೆಗೆ ಹಾಜರಾಗದಿದ್ದರೆ ಎಸ್‌ಐಟಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧತೆ ನಡೆಸಿದೆ ಎಂದು ತಿಳಿದುಬಂದಿದೆ.