ಬೆಂಗಳೂರು: ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿ ಪ್ರಕರಣದಲ್ಲಿ ಕೇಳಿ ಬಂದಿರುವ ಭ್ರಷ್ಟಾಚಾರ ಪ್ರಕರಣವನ್ನು ಲೋಕಸಭಾ ಚುನಾವಣೆ ಬಳಿಕ ಸಿಐಡಿ ತನಿಖೆಗೆ ವಹಿಸುವ ಸಾಧ್ಯತೆಗಳಿವೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಹಗರಣ ನಡೆದಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನ್ಯಾಯಾಂಗ ತನಿಖೆಯನ್ನು ರಚಿಸಿತು, ತನಿಖೆಯಲ್ಲಿ ಭ್ರಷ್ಟಾಚಾರವನ್ನು ನಡೆದಿರುವಪುದು ಸಾಬೀತಾಗಿದ್ದು, ಕ್ರಿಮಿನಲ್ ತನಿಖೆಗೆ ಶಿಫಾರಸು ಮಾಡಿದೆ.
ಕಳೆದ ಸಂಪುಟ ಸಭೆಯ (ಚುನಾವಣಾ ನೀತಿ ಸಂಹಿತೆ ಮೊದಲು) ಮುಂದೆ ಈ ಕುರಿತ ವರದಿಯನ್ನು ಇರಿಸಲಾಗಿತ್ತು. ವರದಿಯು ಭ್ರಷ್ಟಾಚಾರ ಮತ್ತು ರಾಜಕಾರಣಿಗಳ ಒಳಗೊಳ್ಳುವಿಕೆಯನ್ನು ದೃಢಪಡಿಸಿದೆ. ಆಯೋಗವು ಶಾಸಕರನ್ನು ಕರೆಸುವ ಅಧಿಕಾರವನ್ನು ಹೊಂದಿಲ್ಲ. ಹೀಗಾಗಿ ಕ್ರಿಮಿನಲ್ ತನಿಖೆಗೆ ಶಿಫಾರಸು ಮಾಡಿದೆ ಎಂದು ಹೇಳಿದರು