ಮಾಜಿ ಶಾಸಕ ಪ್ರೀತಂ ಗೌಡ ಆಪ್ತರು ಮತ್ತು ಪ್ರಜ್ವಲ್ ರೇವಣ್ಣ(ಸಂಗ್ರಹ ಚಿತ್ರ) 
ರಾಜ್ಯ

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸು: ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಎಸ್ ಐಟಿ ವಶಕ್ಕೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್​​ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತ ಲಿಖಿತ್​ ಮತ್ತು ಅವರ ಕಚೇರಿ ಸಿಬ್ಬಂದಿ ಚೇತನ್​​ನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ನವೀನ್ ಗೌಡ ಮತ್ತು ಪುಟ್ಟರಾಜು ಎಂಬುವರಿಗಾಗಿ ಅಧಿಕಾರಿಗಳು ಹುಡುಕಾಟ ತೀವ್ರಗೊಳಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ್​ ವಿಡಿಯೋಗಳು ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿದ್ದಂತೆ ಕಳೆದ ತಿಂಗಳು ಏಪ್ರಿಲ್ 23 ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ದಳ (SIT) ರಚಿಸಿತು. ಬಳಿಕ ಪ್ರಕರಣ ಎಸ್​ಐಟಿಗೆ ವರ್ಗಾವಣೆಯಾಯಿತು. ನಂತರ ಎಸ್​ಐಟಿ ಹಲವು ತಂಡಗಳನ್ನು ರಚಿಸಿಕೊಂಡು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.

ಸದ್ಯ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​ಐಟಿ ತಂಡ ಹಾಸನದಲ್ಲಿ ಬೀಡು ಬಿಟ್ಟಿದೆ. ಈ ಅಶ್ಲೀಲ ವಿಡಿಯೋಗಳನ್ನು ಹರಿಬಿಟ್ಟವರನ್ನು ವಶಕ್ಕೆ ಪಡೆದುಕೊಳ್ಳುತ್ತಿದೆ. ಇದೀಗ ಅಧಿಕಾರಿಗಳು ಮಾಜಿ ಶಾಸಕ ಪ್ರೀತಂಗೌಡ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಚೇತನ್​ ಹಾಗೂ ಆಪ್ತ ಲಿಖಿತ್​ನನ್ನು ಪೆನ್ ಡ್ರೈವ್ ಇಟ್ಟುಕೊಂಡಿದ್ದ ಆರೋಪದ ಮೇಲೆ ವಶಕ್ಕೆ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬದಲಾಗುತ್ತಿರುವ ಭಾರತದ ಆರ್ಥಿಕ ಪಯಣಕ್ಕೆ ಹೊಸ ಕನ್ನಡಿ; ವಾಣಿಜ್ಯ ಪತ್ರಿಕೋದ್ಯಮಕ್ಕೆ The New Indian Express ಹೊಸ ಕೊಡುಗೆ, 'The Financial Standard' ಲೋಕಾರ್ಪಣೆ

'ಬರೀ ಮಾತು ಸಾಕು, ಒಪ್ಪಂದಕ್ಕೆ ಬನ್ನಿ; ಸವಾಲು ಹಾಕಿದರೆ ಸಮುದ್ರದ ತಳ ಸೇರುತ್ತೀರಿ': ಇರಾನ್ ಸಂಧಾನಕಾರರಿಗೆ ಟ್ರಂಪ್ ಎಚ್ಚರಿಕೆ, ಮಾತುಕತೆ ವಿಫಲವಾದರೆ ಮತ್ತೆ ದಾಳಿ..!

ಶೂ, ಸಾಕ್ಸ್ ವಿತರಣೆ ವಿಳಂಬ: ಮನವಿ ಸಲ್ಲಿಸಲು ಬಂದವರ ಮೇಲೆ ಸಿಡಿಮಿಡಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿರುದ್ಧ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ..!

ಮತಪಟ್ಟಿ ಪರಿಷ್ಕರಣೆ ವಿವಾದಕ್ಕೆ ತಿರುಗೇಟು; ಕಲಬುರಗಿಯಲ್ಲಿ BJP ಪಾದಯಾತ್ರೆ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿ..!

ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆಗೆ ಭಾರತ ಆಹ್ವಾನಿಸಲಿ: ಪಾಕಿಸ್ತಾನ ಸಚಿವ ಮುಸಾದಿಕ್ ಮಲಿಕ್