ನಾಗರಿಕ ಸಮಾಜದ ಗುಂಪುಗಳ ಸದಸ್ಯರು ಪೋಸ್ಟ್ ಕಾರ್ಡು ಮೂಲಕ ಕಳುಹಿಸಿರುವುದು  
ರಾಜ್ಯ

ರಾಜಕೀಯ ದ್ವೇಷ ಭಾಷಣ ಬಗ್ಗೆ ಎಚ್ಚೆತ್ತುಕೊಳ್ಳಿ: ಚುನಾವಣಾ ಆಯೋಗಕ್ಕೆ ಪೋಸ್ಟ್ ಕಾರ್ಡ್ ಪ್ರತಿಭಟನಾ ಅಭಿಯಾನ

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಜಕಾರಣಿಗಳ ದ್ವೇಷದ ಭಾಷಣದ ಬಗ್ಗೆ ಭಾರತೀಯ ಚುನಾವಣಾ ಆಯೋಗದ (ECI) ಕ್ರಮ ಕೈಗೊಳ್ಳದಿರುವುದರ ವಿರುದ್ಧ ಧ್ವನಿ ಎತ್ತಿದ್ದು, ನಾಗರಿಕ ಸಮಾಜದ ಸದಸ್ಯರು ಮತ್ತು ನಾಗರಿಕರು ಪೋಸ್ಟ್‌ಕಾರ್ಡ್ ನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲು ಅಂಚೆ ಕಚೇರಿಗಳು ಮತ್ತು ಅಂಚೆ ಪೆಟ್ಟಿಗೆಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರು. ಬೆಂಗಳೂರು, ಮೈಸೂರು ಸೇರಿದಂತೆ ದೇಶದ 11 ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ವೇಳೆ ರಾಜಕಾರಣಿಗಳ ದ್ವೇಷದ ಭಾಷಣದ ಬಗ್ಗೆ ಭಾರತೀಯ ಚುನಾವಣಾ ಆಯೋಗದ (ECI) ಕ್ರಮ ಕೈಗೊಳ್ಳದಿರುವುದರ ವಿರುದ್ಧ ಧ್ವನಿ ಎತ್ತಿರುವ ನಾಗರಿಕ ಸಮಾಜದ ಸದಸ್ಯರು ಪೋಸ್ಟ್‌ಕಾರ್ಡ್ ನ್ನು ಚುನಾವಣಾ ಆಯೋಗಕ್ಕೆ ಕಳುಹಿಸಲು ಅಂಚೆ ಕಚೇರಿಗಳು ಮತ್ತು ಅಂಚೆ ಪೆಟ್ಟಿಗೆಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರು. ಬೆಂಗಳೂರು, ಮೈಸೂರು ಸೇರಿದಂತೆ ದೇಶದ 11 ನಗರಗಳಲ್ಲಿ ಪ್ರತಿಭಟನೆ ನಡೆಸಲಾಯಿತು.

#GrowASpineOrResign ಅಭಿಯಾನವು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಯನ್ನು ಉತ್ತೇಜಿಸಲು ಚುನಾವಣಾ ಆಯೋಗವನ್ನು ನಾಗರಿಕರು ಒತ್ತಾಯಿಸಿದರು. ಹಲವು ಬಿಜೆಪಿ ನಾಯಕರು ದ್ವೇಷದ ಭಾಷಣ ಮಾಡುತ್ತಿದ್ದು ಅವರ ವಿರುದ್ಧ ದಂಡನಾತ್ಮಕ ಕ್ರಮಕ್ಕಾಗಿ ಒತ್ತಾಯಿಸಿದರು. ಚುನಾವಣಾ ಮಾದರಿ ನೀತಿ ಸಂಹಿತೆಯನ್ನು (MCC) ಬಹಿರಂಗವಾಗಿ ಉಲ್ಲಂಘಿಸಿದ್ದಾರೆ ಎಂದು ಆಪಾದಿಸಿದರು.

ವಿನಯ್ ಕುಮಾರ್ ಎಂಬ ಕಾರ್ಯಕರ್ತ ದ್ವೇಷ ಭಾಷಣದ ವಿರುದ್ಧ ಇಸಿಐ ಯಾವುದೇ ಕ್ರಮ ಕೈಗೊಂಡರೂ ನಿಷ್ಪ್ರಯೋಜಕವಾಗಿದೆ. ಅಂತಹ ಹೇಳಿಕೆಗಳನ್ನು ನೀಡುವುದರಿಂದ ಪ್ರಧಾನಿಯನ್ನು ಸಹ ತಡೆದಿಲ್ಲ. ಮೇಲಾಗಿ, ಚುನಾವಣೆಯ ನಂತರವೂ ಇದು ಸಮಾಜದ ಮೇಲೆ ದೀರ್ಘಕಾಲೀನ ಪರಿಣಾಮ ಬೀರುತ್ತದೆ ಎಂಬುದು ಕಳವಳಕಾರಿಯಾಗಿದೆ ಎಂದು ಹೇಳುತ್ತಾರೆ.

ಬೆಂಗಳೂರಿನ 200 ಕ್ಕೂ ಹೆಚ್ಚು ವ್ಯಕ್ತಿಗಳು ಮತ್ತು ದೇಶಾದ್ಯಂತ ಸಾವಿರಾರು ಜನರು ವಿನಯ್ ಕುಮಾರ್ ವಿನ್ಯಾಸಗೊಳಿಸಿದ ಪೋಸ್ಟ್‌ಕಾರ್ಡ್‌ಗಳನ್ನು ಭಾರತೀಯ ಚುನಾವಣಾ ಆಯೋಗಕ್ಕೆ ಕಳುಹಿಸಿದ್ದಾರೆ. ವಕೀಲರು, ಕಾರ್ಯಕರ್ತರು, ಚಲನಚಿತ್ರ ನಿರ್ಮಾಪಕರು ಮತ್ತು ನಾಗರಿಕರು ಸೇರಿದಂತೆ 20 ಸಂಸ್ಥೆಗಳ ಸಹಿಯೊಂದಿಗೆ ಬೆಂಗಳೂರು, ಹೈದರಾಬಾದ್ ಮತ್ತು ಮುಂಬೈನಲ್ಲಿರುವ ಮುಖ್ಯ ಚುನಾವಣಾಧಿಕಾರಿಗಳಿಗೆ ತಂಡ ಜಂಟಿ ದೂರನ್ನು ಸಲ್ಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT