ಎಚ್ ಡಿ ರೇವಣ್ಣ 
ರಾಜ್ಯ

ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು, ಕೆಆರ್ ನಗರಕ್ಕೆ ತೆರಳದಂತೆ ನಿರ್ಬಂಧ

ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಲ್ಲಿ ಪ್ರಕರಣದ ಕುರಿತು ವಾದ ವಿವಾದವನ್ನು ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆಲಿಸಿದರು. ನಂತರ ರೇವಣ್ಣಗೆ 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ಕೋರ್ಟ್ ಸೂಚಿಸಿ ಜಾಮೀನು ಮಂಜೂರು ಮಾಡಿದರು.

ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ. ಇನ್ನು ಎಚ್ ಡಿ ರೇವಣ್ಣ ನಾಳೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ರೇವಣ್ಣ ಪರ ವಾದ ಮಂಡಿಸಿದ ಹೈಕೋರ್ಟ್‌ನ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಅಪಹರಣ ಹಾಗೂ ಒತ್ತೆ ಇಡುವುದು ಅಪರಾಧ.‌ ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್​ 364 ಎ ಅನ್ವಯಿಸಲು ಅಗತ್ಯ ಅಂಶಗಳಿಲ್ಲ.‌‌ ಅಪಹರಣ ಮಾಡಿದಾಗ ಹಣಕ್ಕೆ ಬೇಡಿಕೆ ಇಡಲಾಗುತ್ತದೆ. ಇಲ್ಲವೆ ಕೊಲೆ ಮಾಡುವುದಾಗಿ ಬೆದರಿಸಬೇಕು. ಆದರೆ, ಈ ಅಪಹರಣ ಪ್ರಕರಣದಲ್ಲಿ ಅಂತಹ ಅಂಶಗಳಿಲ್ಲ. ಪೊಲೀಸರು ಈ ಪ್ರಕರಣ ದಾಖಲಿಸಿರುವುದೇ ಕಾನೂನುಬಾಹಿರ. 10 ವರ್ಷಗಳಿಂದ‌ ಮಹಿಳೆ ರೇವಣ್ಣ ಅವರ ಮನೆಯಲ್ಲಿ ಕೆಲಸ‌ ಮಾಡುತ್ತಿದ್ದದು ನಿಜ. ಆದರೆ, ಅಪಹರಣ ಪ್ರಕರಣದಲ್ಲಿ ಕಕ್ಷಿದಾರರ ಸಂಬಂಧಿಯಲ್ಲ. ಮೊದಲು ದಾಖಲಿಸಿದ ಎಫ್ಐಆರ್​​ನ ಸಂತ್ರಸ್ತೆ ಮಾತ್ರ ಅವರ ಸಂಬಂಧಿ ಎಂದು ಸ್ಪಷ್ಟಪಡಿಸಿದ್ದರು.

ಐಪಿಸಿ ಸೆಕ್ಷನ್ 27 ಎವಿಡೆನ್ಸ್ ಕಾಯ್ದೆಯಡಿ ಸಾಕ್ಷ್ಯಾಧಾರ ಸಂಗ್ರಹಿಸಬೇಕು.‌ ಈ‌ ಕೇಸ್​​ನಲ್ಲಿ ಅದ್ಯಾವುದನ್ನೂ ಎಸ್ಐಟಿ ಮಾಡಿಲ್ಲ ಎಂದು ಸೆಕ್ಷನ್​​ 364 ಎ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳು ಜಾಮೀನು ನಿರಾಕರಣೆ ಮಾಡಿರುವ ತೀರ್ಪುಗಳ ಬಗ್ಗೆ ಸಿ.ವಿ.‌ ನಾಗೇಶ್ ಅವರು ನ್ಯಾಯಾಲಯದ ಮುಂದಿಟ್ಟಿದ್ದರು.

ಇದಕ್ಕೆ ಪ್ರತಿಯಾಗಿ, ಹೆಚ್ಚುವರಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್‌ಗಳಾದ ಜಯ್ನಾ ಕೊಠಾರಿ ಮತ್ತು ಅಶೋಕ್ ನಾಯಕ್ ಅವರು ಆರೋಪಿ ರೇವಣ್ಣ ಅವರು ಇನ್ನೂ ತಲೆಮರೆಸಿಕೊಂಡಿರುವ ತನ್ನ ಮಗ ಪ್ರಜ್ವಲ್ ರೇವಣ್ಣ ವಿರುದ್ಧದ ಅನೇಕ ಲೈಂಗಿಕ ದೌರ್ಜನ್ಯದ ಹಲವಾರು ವಿಷಯಗಳನ್ನು ಮುಚ್ಚಿಡಲು ಸಂತ್ರಸ್ತೆಯನ್ನು ಅಪಹರಣ ಮಾಡಲಾಗಿತ್ತು ಎಂದು ವಾದಿಸಿದರು. ಅಲ್ಲದೆ, ಸಂತ್ರಸ್ತೆ ತನ್ನ ಹೇಳಿಕೆಯಲ್ಲಿ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ್ದು, ಇದು ಅಪಹರಣದ ಸ್ಪಷ್ಟ ಪ್ರಕರಣವಾಗಿದೆ. ಪ್ರಕರಣ ಸಾಬೀತಾದರೆ ಶಿಕ್ಷೆಯ ತೀವ್ರತೆ ಈ ಪ್ರಕರಣದಲ್ಲಿ ಹೆಚ್ಚು. ಆರೋಪಿಯು ಪ್ರಭಾವಿಯಾಗಿರುವುದರಿಂದ ಸಂತ್ರಸ್ತರಿಗೆ, ಸಾಕ್ಷಿಗಳಿಗೆ ಅಪಾಯದ ಬೆದರಿಕೆ ಮತ್ತು ಸಾಕ್ಷ್ಯವನ್ನು ಹಾಳುಮಾಡುವ ಭೀತಿ ಇದೆ ಎಂದು ವಾದಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT