ಅನುಷ್ಕಾ ದಹಿಂದೆ, ವಿಜಯ್ ದಹಿಂದೆ ಮತ್ತು ಮಿಹಿರ್ ಜನಗೌಲಿ 
ರಾಜ್ಯ

ವಿಜಯಪುರ: ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮುಳುಗಿ ಮೂವರು ಮಕ್ಕಳ ಸಾವು

ವಿಜಯಪುರ ಹೊರವಲಯದ ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದು, ಗಿಡಗಳಲ್ಲಿ ಸಿಲುಕಿಕೊಂಡಿದ್ದ ಅವರ ಶವಗಳನ್ನು ವಶಕ್ಕೆ ಪಡೆಯಲಾಗಿದೆ.

ವಿಜಯಪುರ: ನಗರದ ಹೊರವಲಯದ ಇಂಡಿ ರಸ್ತೆಯಲ್ಲಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕದಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ನಾಪತ್ತೆಯಾಗಿದ್ದ ಮಕ್ಕಳು ಸೋಮವಾರ ಶವವಾಗಿ ಪತ್ತೆಯಾಗಿದ್ದು, ಗಿಡಗಳಲ್ಲಿ ಸಿಲುಕಿಕೊಂಡಿದ್ದ ಅವರ ಶವಗಳನ್ನು ವಶಕ್ಕೆ ಪಡೆಯಲಾಗಿದೆ. ಮೃತರನ್ನು ಅನುಷ್ಕಾ ದಹಿಂದೆ (9), ವಿಜಯ್ ದಹಿಂದೆ (7) ಸಹೋದರ ಮತ್ತು ಮಿಹಿರ್ ಜನಗೌಲಿ (7) ಎಂದು ಗುರುತಿಸಲಾಗಿದೆ. ಮೊದಲ ಇಬ್ಬರು ಮಕ್ಕಳು ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಗದಗ ಜಿಲ್ಲೆಯ ನಿವಾಸಿಗಳಾಗಿದ್ದರೆ, ಮತ್ತೊಬ್ಬರು ವಿಜಯಪುರ ನಗರದ ನಿವಾಸಿಯಾಗಿದ್ದಾರೆ.

ಎಲ್ಲಾ ಮಕ್ಕಳು ಆಶ್ರಮ ರಸ್ತೆಯ ಚಬುಕ್ಸಾವರ್ ದರ್ಗಾದಲ್ಲಿರುವ ಮನೆಯಿಂದ ನಾಪತ್ತೆಯಾಗಿದ್ದರು. ಪೊಲೀಸರ ಪ್ರಕಾರ, ಭಾನುವಾರ ಬೆಳಗ್ಗೆ 10.00 ಗಂಟೆ ಸುಮಾರಿಗೆ ಮಕ್ಕಳು ಮನೆಯಿಂದ ಒಂಟೆ ಸವಾರಿಗೆ ತೆರಳಿದ್ದರು. ಸವಾರಿ ಬಳಿಕ ಮಕ್ಕಳು ಒಂಟೆಯನ್ನು ಹುಡುಕಲು ಹೋದರು ಎಂದು ವರದಿಯಾಗಿದೆ. ಅವರ ಮನೆ ಬಳಿ ಅಳವಡಿಸಿರುವ ಸಿಸಿಟಿವಿಗಳಲ್ಲಿ ಮೂವರು ಮಕ್ಕಳು ಜೊತೆಯಲ್ಲಿ ಹೋಗುತ್ತಿರುವುದು ಕಂಡುಬಂದಿದೆ. ಗಂಟೆ ಕಳೆದರೂ ಮಕ್ಕಳು ಮನೆಗೆ ಮರಳದ ಹಿನ್ನೆಲೆಯಲ್ಲಿ ಗಾಬರಿಗೊಂಡ ಪೋಷಕರು ತೀವ್ರವಾಗಿ ಹುಡುಕಾಟ ಆರಂಭಿಸಿದ್ದಾರೆ. ಆದರೆ ಸುದೀರ್ಘ ಹುಡುಕಾಟದ ನಂತರವೂ ಅವರ ಪೋಷಕರು ಮತ್ತು ಸಂಬಂಧಿಕರಿಗೆ ಯಾವುದೇ ಸುಳಿವು ಸಿಗದ ಕಾರಣ ನಾಪತ್ತೆ ಕಾರಣ ಪ್ರಕರಣ ದಾಖಲಿಸಲು ಎಪಿಎಂಸಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ಮಕ್ಕಳಿಗಾಗಿ ಹುಡುಕಾಟ ಆರಂಭಿಸಿದ ಪೋಷಕರು ಮತ್ತು ಪೊಲೀಸರು ಅವರು ಮನೆಗಳ ಬಳಿಯಿರುವ ಜನರನ್ನು ವಿಚಾರಿಸಿದ್ದು, ಸ್ಥಳದ ಬಳಿ ಅಳವಡಿಸಲಾದ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ್ದಾರೆ. ಅಂತಿಮವಾಗಿ, ಸೋಮವಾರ ಮಧ್ಯಾಹ್ನ ಮಕ್ಕಳ ಶವಗಳು ಶುದ್ಧೀಕರಣ ಘಟಕದ ಬೃಹತ್ ಟ್ಯಾಂಕ್‌ಗಳಲ್ಲಿ ತೇಲುತ್ತಿದ್ದವು.ಇದೇ ವೇಳೆ ಮಕ್ಕಳ ಮೃತದೇಹ ಕಂಡು ಪಾಲಕರು ಕಂಗೆಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೋಷಕರು, ಸಂಬಂಧಿಕರು, ನೆರೆಹೊರೆಯವರು ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸುರಕ್ಷತಾ ಕ್ರಮಗಳನ್ನು ಅಳವಡಿಸುವಲ್ಲಿ ವಿಫಲವಾದ ಮಹಾನಗರ ಪಾಲಿಕೆಯ ನಿರ್ಲಕ್ಷ್ಯದಿಂದ ಈ ದುರಂತ ಘಟನೆ ನಡೆದಿದೆ ಎಂದು ಆರೋಪಿಸಿದರು.

ಸೂಕ್ತ ಬ್ಯಾರಿಕೇಡ್‌, ಬೇಲಿ ಅಳವಡಿಸಿ ಭದ್ರತಾ ಸಿಬ್ಬಂದಿ ಕೆಲಸ ಮಾಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ ಎಂದರು. ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ಪ್ರದೇಶದ ಕಾರ್ಪೊರೇಟರ್ ಸುನಂದಾ ಕುಮಾಸಿ, ಘಟನೆಯ ಬಗ್ಗೆ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸಿದ್ದಾರೆ. ಆದರೆ ಈ ದುರ್ಘಟನೆಗೆ ಸಿಟಿ ಕಾರ್ಪೊರೇಷನ್ ಅಧಿಕಾರಿಗಳು ಮತ್ತು ಗುತ್ತಿಗೆದಾರರೇ ಕಾರಣ ಎಂದು ದೂರಿದರು. "ಇತ್ತೀಚೆಗೆ, ಗುತ್ತಿಗೆದಾರರು ದುರಸ್ತಿಗಾಗಿ ಬೇಲಿಗಳನ್ನು ತೆಗೆದಿದ್ದರು. ಆದರೆ ಕಾಮಗಾರಿ ಮುಗಿದ ಬಳಿಕ ಮತ್ತೆ ಬೇಲಿ ಮುಚ್ಚಿರಲಿಲ್ಲ, ಈ ದುರಂತ ಘಟನೆಗೆ ಎರಡನೇ ಕಾರಣವೆಂದರೆ ನಿಷ್ಕ್ರಿಯ ಭದ್ರತಾ ಸಿಬ್ಬಂದಿ. ಕಾವಲುಗಾರರು ಸ್ಥಳದಲ್ಲಿ ಸಕ್ರಿಯವಾಗಿರಬೇಕು, ಇದು ಘಟನೆಯನ್ನು ತಡೆಯಲು ಸಹಾಯ ಮಾಡುತ್ತದೆ. ಘಟನೆ ಹೇಗೆ ನಡೆದಿದೆ ಎಂದು ತಿಳಿಯಲು ಪ್ರಯತ್ನಿಸಿದಾಗ ತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಕಾರ್ಯನಿರ್ವಹಿಸದೇ ಇರುವುದು ಕಂಡುಬಂದಿದೆ ಎಂದು ಅವರು ಹೇಳಿದರು.

ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಬೇಲಿಗಳನ್ನು ಅಳವಡಿಸುವುದು, ಸಕ್ರಿಯ ಭದ್ರತಾ ಸಿಬ್ಬಂದಿಯನ್ನು ನೇಮಿಸುವುದು ಮತ್ತು ಕಾರ್ಯನಿರ್ವಹಿಸುತ್ತಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಆಯುಕ್ತರನ್ನು ತುರ್ತು ಸಭೆಗೆ ಕರೆಯಲು ವಿನಂತಿಸುವುದಾಗಿ ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT