ಹೆಚ್ ಡಿ ರೇವಣ್ಣ 
ರಾಜ್ಯ

ಮಾಜಿ ಸಚಿವ, ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಜೈಲಿನಿಂದ ಬಿಡುಗಡೆ

ಸಂಸದ ಪ್ರಜ್ವಲ್​ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿದ್ದ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದ ಮೇಲೆ ಎಸ್ ಐಟಿ ಅಧಿಕಾರಿಗಳಿಂದ ಜೈಲುಪಾಲಾಗಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಆಗಿದ್ದು, ಇಂದು ಮಂಗಳವಾರ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಹೆಚ್​ಡಿ ರೇವಣ್ಣ ಅವರು ಬಿಡುಗಡೆಯಾಗುತ್ತಿದ್ದಂತೆ, ಅವರ ಅಭಿಮಾನಿಗಳು ಜಯ ಘೋಷಣೆ ಹಾಕಿ ಸಂಭ್ರಮಿಸಿದರು. ಕಾರಾಗೃಹದ ಮುಂದೆ ಸೇರಿದ್ದ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್​ ಮಾಡಿದರು. ಈ ವೇಳೆ ಗೊಂದಲ ವಾತಾವರಣ ಉಂಟಾಯಿತು.

ನಿವಾಸಕ್ಕೆ ತೆರಳಿದ ರೇವಣ್ಣ: ಮೇ 4ರಂದು ತಮ್ಮ ತಂದೆ ಹೆಚ್ ಡಿ ದೇವೇಗೌಡರ ನಿವಾಸದಲ್ಲಿಯೇ ಎಸ್ ಐಟಿ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ರೇವಣ್ಣ ಇಂದು ಜೈಲಿಂದ ಹೊರಬಂದು ನೇರವಾಗಿ ದೇವೇಗೌಡರ ನಿವಾಸಕ್ಕೆ ಆಗಮಿಸಿ ತಂದೆ-ತಾಯಿ ಆಶೀರ್ವಾದ ಪಡೆದರು.

ರೇವಣ್ಣ ಅವರಿಗೆ ಜಾಮೀನು ಸಿಕ್ಕಿರುವ ಬಗ್ಗೆ ಅವರ ಸೋದರ ಜೆಡಿಎಸ್ ಅಧ್ಯಕ್ಷ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯದಲ್ಲಿ ನಡೆದಿರುವ ಅತ್ಯಂತ ಹೀನಾಯ ಘಟನೆಯಿದು. ರೇವಣ್ಣಗೆ ಜಾಮೀನು ಸಿಕ್ಕಿದೆ ಎಂದು ಸಂಭ್ರಮ ಪಡುವುದು ಬೇಡ. ನಾನು ಸಂತೋಷಪಡುತ್ತೇನೆ ಎಂದು ಭಾವಿಸಬೇಡಿ. ಕಾರ್ಯಕರ್ತರು ಸಂಭ್ರಮಿಸುವ ಸಮಯ ಇದಲ್ಲ. ಇದು ರಾಜ್ಯವೇ ತಲೆ ತಗ್ಗಿಸುವ ಘಟನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT