ದೇವರಾಜೇಗೌಡ ಪೊಲೀಸ್ ವಶಕ್ಕೆ 
ರಾಜ್ಯ

ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ದೇವರಾಜೇಗೌಡ 3 ದಿನ ಪೊಲೀಸ್‌ ಕಸ್ಟಡಿಗೆ

ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ಡಿ ದೇವರೇಜೇಗೌಡ ಅವರನ್ನು ಹೊಳೆನರಸೀಪುರ ನ್ಯಾಯಾಲಯವು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಬೆಂಗಳೂರು: ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡದ ಆರೋಪದ ಮೇಲೆ ಬಂಧಿತರಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ಡಿ ದೇವರೇಜೇಗೌಡ ಅವರನ್ನು ಹೊಳೆನರಸೀಪುರ ನ್ಯಾಯಾಲಯವು 3 ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ.

ಹೊಳೆನರಸೀಪುರ ಟೌನ್‌ ಠಾಣೆಯ ಪೊಲೀಸರು ಸೋಮವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಎಸ್‌ ಸಿದ್ದರಾಮ ಅವರಿಗೆ ಮನವಿ ಮಾಡಿದರು. ಈ ಮನವಿ ಪುರಸ್ಕರಿಸಿದ ನ್ಯಾಯಾಧೀಶರು ದೇವರೇಜೇಗೌಡರನ್ನು ಮೇ 16ವರೆಗೆ ಪೊಲೀಸ್‌ ಕಸ್ಟಡಿ ನೀಡಿದ್ದಾರೆ.

ಮೇ 11ರಂದು ದೇವರಾಜೇಗೌಡ ಬಂಧನವಾಗಿತ್ತು. ಅಂದು ಪ್ರಕರಣದ ಮಾಹಿತಿ ಪಡೆದಿದ್ದ ನ್ಯಾಯಾಲಯವು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.

10 ದಿನಗಳ ಹಿಂದೆ ಪರಿಚಯವಾಗಿದ್ದ ದೇವರಾಜೇಗೌಡ ಆಗಾಗ ಫೋನ್ ಮಾಡಿ ಹೊಳೆನರಸೀಪುರದಲ್ಲಿ ಮನೆ ಕಟ್ಟಿಸಿಕೊಡುತ್ತೇನ ಎಂದು ನಂಬಿಸಿ ಹಾಸನಕ್ಕೆ ಕರೆದೊಯ್ದು ದೈಹಿಕವಾಗಿ ದುರುಪಯೋಗ ಮಾಡಿಕೊಂಡಿದ್ದಾರೆ. ನಂತರ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಜ್ವಲ್‌ ರೇವಣ್ಣ ಪ್ರಕರಣದ ಪೆನ್‌ಡ್ರೈವ್‌ ಹಂಚಿಕೆಯ ಹಿಂದೆ ದೇವರಾಜೇಗೌಡ ಪಾತ್ರ ಇದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲೂ ತನಿಖೆ ನಡೆಯುವ ಸಾಧ್ಯತೆ ದಟ್ಟವಾಗಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲೇಟ್ ಆದರೂ, ಸರಿಯಾದ ನಿರ್ಧಾರ: ರಾಜ್ಯ BJP ಉಸ್ತುವಾರಿ ರಾಧಾ ಮೋಹನದಾಸ್ ಬದಲಾವಣೆಗೆ 2 ಕಾರಣ ನೀಡಿದ ಯತ್ನಾಳ್

'ಈ ದೇಶವನ್ನು ದೇವರೇ ಕಾಪಾಡಬೇಕು; 5 ಗಂಟೆಯ ಪ್ರಯಾಣ ನರಕ': ರೈಲಿನಲ್ಲಾದ ಕಹಿ ಅನುಭವ ಬಿಚ್ಚಿಟ್ಟ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ನಿತ್ಯ 4,000 ಕ್ಯೂಸೆಕ್ ನೀರು ಬಿಡಲು CWRC ಸೂಚನೆ; CM ಡಿಕೆಶಿ ಹೇಳಿದ್ದೇನು?

ಕೋಲಾರ: ಚೆನ್ನೈ - ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ!

ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು: ಮಧ್ಯಪ್ರಾಚ್ಯ ಯುದ್ಧ ವಿಸ್ತರಣೆ ಸುಳಿವು ನೀಡಿದ ಇರಾನ್; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!