ಪೊಲೀಸರು ತಪಾಸಣೆ ನಡೆಸುತ್ತಿರುವುದು. 
ರಾಜ್ಯ

ಮುಂದುವರೆದ ಹುಚ್ಚಾಟ: ನಗರದಲ್ಲಿ ಪ್ರತಿಷ್ಟಿತ ಶಾಲೆಗಳಿಗೆ ಬಾಂಬ್ ಬೆದರಿಕೆ; ಪೊಲೀಸರಿಂದ ಪರಿಶೀಲನೆ

ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ. ನಗರದಲ್ಲಿ ಮಂಗಳವಾರ ಕನಿಷ್ಟ 8 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಬೆಂಗಳೂರು: ದೇಶಾದ್ಯಂತ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಹುಸಿ ಕರೆಗಳು ಬರುತ್ತಿದ್ದು, ಆತಂಕದ ವಾತಾವರಣ ಸೃಷ್ಟಿಯಾಗುತ್ತಿರುವುದು ಇತ್ತೀಚೆಗೆ ಸಾಮಾನ್ಯವಾಗಿದೆ. ನಕಲಿ ಬೆದರಿಕೆ ಕರೆ ಎಂದು ತಿಳಿದಿದ್ದರೂ ಉದಾಸೀನ ಮಾಡುವಂತಿಲ್ಲ. ನಗರದಲ್ಲಿ ಮಂಗಳವಾರ ಕನಿಷ್ಟ 8 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಗಳು ಬಂದು, ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಶಾಲೆಗಳು ಬೆದರಿಕೆ ಇ-ಮೇಲ್ ಬಗ್ಗೆ ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ತೀವ್ರ ಪರಿಶೀಲನೆ ನಡೆಸಿತು. ಆದರೆ, ಯಾವುದೇ ಸ್ಫೋಟಕ ವಸ್ತುಗಳು ಪತ್ತಯಾಗಿರಲಿಲ್ಲ. ನಂತರ ಇದು ಹುಸಿ ಬಾಂಬ ಬೆದರಿಕ ಎಂಬುದು ತಿಳಿದುಬಂದಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರು ಸ್ಕಾಟಿಷ್ ಶಾಲೆ, ಭವನ್ ಬೆಂಗಳೂರು ಪ್ರೆಸ್ ಸ್ಕೂಲ್, ಚಿತ್ರಕೂಟ ಶಾಲೆ, ದೀಕ್ಷಾ ಹೈಸ್ಕೂಲ್, ಎಡಿಫೈ ಸ್ಕೂಲ್, ಗಂಗೋತ್ರಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್, ಗಿರಿಧನ್ವ ಶಾಲೆ ಮತ್ತು ಜೈನ್ ಹೆರಿಟೇಜ್ ಶಾಲೆಗಳಿಗೆ ಬೆದರಿಕೆ ಇ-ಮೇಲ್ ಗಳು ಬಂದಿದ್ದವು ಎನ್ನಲಾಗಿದೆ.

ಶಾಲಾ ಆವರಣದಲ್ಲಿ ಬಾಂಬ್ ಇಡಲಾಗಿದೆ. ಅದು ಇನ್ನು ಕೆಲವೇ ಗಂಟೆಗಳಲ್ಲಿ ಸ್ಫೋಟಗೊಳ್ಳಲಿದೆ. ಕೋರ್ಟ್ ಎಂಬ ಗುಂಪು ಈ ಹತ್ಯಾಕಾಂಡದ ಹಿಂದೆ ಇದೆ ಎಂದು ಶಾಲೆಗಳಿಗೆ ಬೆದರಿಕೆ ಇ-ಮೇಲ್ ಬಂದಿರುವುದಾಗಿ ತಿಳಿದುಬಂದಿದೆ.

ಈ ಹಿಂದೆಯೂ ಬೆಂಗಳೂರಿನ ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ-ಮೇಲ್‌ಗಳು ಬಂದಿದ್ದವು. ಒಂದೇ ಬಾರಿ 20-30 ಶಾಲೆಗಳಿಗೆ ಏಕ ಕಾಲಕ್ಕೆ ಬಾಂಬ್ ಇಡಲಾಗಿದೆ ಎಂಬ ಸಂದೇಶ ಇಡೀ ನಗರದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್-ಪ್ರಿಯಾಂಕಾ ವಶಕ್ಕೆ ಪಡೆದ ದೆಹಲಿ ಪೊಲೀಸರು: 9 ಗಂಟೆಗಳ ಇಂಡಿಯಾ ಕೂಟದ ಧರಣಿಗೆ ಬ್ರೇಕ್!

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಕಲಬುರಗಿಯಲ್ಲಿ ಶಾಕಿಂಗ್ ಘಟನೆ: ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

ಪ್ರಿಯಕರನೊಂದಿಗೆ ಸೇರಿ ಪತಿ ಹತ್ಯೆ: ಚಾಟ್​ನಿಂದ ಕೊಲೆ ರಹಸ್ಯ ಬಯಲು; ಹೃದಯಾಘಾತದ ಕಥೆ ಕಟ್ಟಿದ್ದ ಪತ್ನಿ ಬಂಧನ!