ಡಾ. ರಾಮ್‌ ಪ್ರಸಾತ್‌ ಮನೋಹರ್‌  
ರಾಜ್ಯ

110 ಗ್ರಾಮಗಳಲ್ಲಿ ಕಾವೇರಿ ನೀರಿನ ಸಂಪರ್ಕ ನೀಡಲು ಗ್ರಾಹಕರ ಮನೆಬಾಗಿಲಿಗೆ ಜಲಮಂಡಳಿ

ಕಾವೇರಿ 5 ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡುವ ಸಿದ್ದತೆ ನಡೆಸಿದೆ. ಈ 110 ಗ್ರಾಮಗಳಲ್ಲಿ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ಬೆಂಗಳೂರು: ಕಾವೇರಿ 5 ನೇ ಹಂತದ ಕಾಮಗಾರಿ ಪೂರ್ಣಗೊಳ್ಳುವ ಅಂತಿಮ ಹಂತದಲ್ಲಿದ್ದು, ಜಲಮಂಡಳಿ ನೀರು ಸರಬರಾಜು ಮಾಡುವ ಸಿದ್ದತೆ ನಡೆಸಿದೆ. ಈ 110 ಗ್ರಾಮಗಳಲ್ಲಿ ಕಾವೇರಿ ಸಂಪರ್ಕ ನೀಡಲು ಜನರ ಮನೆಬಾಗಿಲಿಗೆ ಜಲಮಂಡಳಿ ತೆರಳಲಿದೆ ಎಂದು ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದರು.

ಕಾವೇರಿ 5 ನೇ ಹಂತದ ಅಂತಿಮ ಹಂತದ ಕಾಮಗಾರಿಗಳು ನಡೆಯುತ್ತಿವೆ. ಇನ್ನು ಕೆಲವೇ ವಾರಗಳಲ್ಲಿ ಈ ಕಾಮಗಾರಿಗಳು ಪೂರ್ಣಗೊಳ್ಳಲಿದ್ದು ನೀರು ಸರಬರಾಜು ಪ್ರಾರಂಭವಾಗಲಿದೆ. ಅದಕ್ಕೂ ಮುನ್ನ ನೀರಿನ ಸಮರ್ಪಕ ಸರಬರಾಜು ಮಾಡುವ ವ್ಯವಸ್ಥೆ ಕಲ್ಪಿಸುವುದು ಹಾಗೂ ಹೊಸ ಕನೆಕ್ಷನ್‌ಗಳನ್ನ ನೊಂದಾಯಿಸಿಕೊಳ್ಳುವ ಪ್ರಕ್ರಿಯೆ ನಡೆಸಬೇಕಾಗಿದೆ. ಈ ಯೋಜನೆಯಿಂದ ಬೆಂಗಳೂರು ನಗರಕ್ಕೆ 750 ಎಂ.ಎಲ್‌.ಡಿ ಯಷ್ಟು ಹೆಚ್ಚಿನ ನೀರು ಲಭ್ಯವಾಗಲಿದೆ. ಇದನ್ನ ಸಮರ್ಪಕವಾಗಿ ಬಳಕೆ ಮಾಡುವ ನಿಟ್ಟಿನಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು 110 ಗ್ರಾಮಗಳಲ್ಲಿ ಎಲ್ಲರೂ ಕಾವೇರಿ ನೀರಿನ ಸಂಪರ್ಕ ಪಡೆಯಲು ಪ್ರೋತ್ಸಾಹಿಸಬೇಕು ಎಂದು ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.

ಅನಧಿಕೃತ ಸಂಪರ್ಕಗಳನ್ನು ಪತ್ತೆ ಹಚ್ಚಿ: 110 ಗ್ರಾಮಗಳಲ್ಲಿ ಕೆಲವೆಡೆ ಅನಧಿಕೃತವಾಗಿ ಸಂಪರ್ಕಗಳನ್ನು ನೀಡಿರುವ ಬಗ್ಗೆ ದೂರುಗಳು ಬಂದಿವೆ. ಇವುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಇವುಗಳನ್ನ ಸಕ್ರಮಗೊಳಿಸಿ ಜಲಮಂಡಳಿಗೆ ಆದಾಯ ಬರುವಂತೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಮರ್ಪಕವಾಗಿ ಹೊಸ ಸಂಪರ್ಕಗಳನ್ನು ನೊಂದಾಯಿಸುವ ಮೂಲಕ ನೀರಿನ ಸದ್ಬಳಕೆ ಆಗುತ್ತದೆ. ಹಾಗೆಯೇ, ಜಲಮಂಡಳಿಗೆ ಅಗತ್ಯವಾದ ಆದಾಯ ದೊರೆಯಲಿದ್ದು ಸಾಲದ ಮರುಪಾವತಿಗೆ ಸಹಾಯವಾಗಲಿದೆ. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಜನರ ಮನೆಬಾಗಿಲಿಗೆ ತೆರಳಿ ನೀರಿನ ಸಂಪರ್ಕ ತಗೆದುಕೊಳ್ಳುವ ನಿಟ್ಟಿನಲ್ಲಿ ಪ್ರೋತ್ಸಾಹಿಸಬೇಕು. ಹೆಚ್ಚಿನ ಜನರು ಕಾವೇರಿ ನೀರಿನ ಸಂಪರ್ಕ ಪಡೆದುಕೊಳ್ಳುವಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್