ಮಿಯಜಾಕಿ ಮಾವಿನ ಹಣ್ಣು 
ರಾಜ್ಯ

ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 'ಮಿಯಾಜಾಕಿ': ಒಂದು ಹಣ್ಣಿನ ಬೆಲೆ 10 ಸಾವಿರ ರೂ..!

ವಿಶ್ವದ ಅತ್ಯಂತ ದುಬಾರಿಯಾದ ಮಿಯಾಜಾಕಿ ಮಾವಿನ ಹಣ್ಣು ಧಾರವಾಡದ ಮಾವು‌ಮೇಳದಲ್ಲಿ ಗಮನ ಸೆಳೆಯುತ್ತಿದ್ದು, ಒಂದು ಹಣ್ಣನ್ನು 10 ಸಾವಿರ ರೂ.ಗಳಿಗೆ ಮಾರಾಟ ಮಾಡಲಾಗಿದೆ.

ಧಾರವಾಡ: ವಿಶ್ವದ ಅತ್ಯಂತ ದುಬಾರಿಯಾದ ಮಿಯಾಜಾಕಿ ಮಾವಿನ ಹಣ್ಣು ಧಾರವಾಡದ ಮಾವು‌ಮೇಳದಲ್ಲಿ ಗಮನ ಸೆಳೆಯುತ್ತಿದ್ದು, ಒಂದು ಹಣ್ಣನ್ನು 10 ಸಾವಿರ ರೂ.ಗಳಿಗೆ ಮಾರಾಟ ಮಾಡಲಾಗಿದೆ.

ತೋಟಗಾರಿಕೆ ಇಲಾಖೆ ಆವರಣದಲ್ಲಿ ಮಂಗಳವಾರದಿಂದ ಆರಂಭಗೊಂಡಿರುವ ಮಾವು ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಈ ಮಾವು ನೆರೆದಿದ್ದವರ ಗಮನ ಸೆಳೆದಿದೆ.

ಕಲಕೇರಿ ಮಾವು ಬೆಳೆಗಾರ ಪ್ರಮೋದ ಗಾಂವಕರ ತೋಟದಲ್ಲಿ ಬೆಳೆದ ಮಾವು ಇದಾಗಿದ್ದು, ಮಾವು ಮೇಳದಲ್ಲಿ ಈ ತಳಿಯ ಮಾವನ್ನು ಇದೇ ಮೊದಲ ಬಾರಿಗೆ ಪ್ರದರ್ಶನಕ್ಕೆ ಇಡಲಾಗಿದೆ. ಜನರು ಇಷ್ಟೊಂದು ದುಬಾರಿ‌ ಮಾವಿನ ಹಣ್ಣನ್ನು ಖರೀದಿಸದೇ ಹೋದರೂ ಕಣ್ಣುಂಬ್ತಿಕೊಳ್ಳಬಹುದಾಗಿದೆ.

ಮಾವಿನ ತಳಿಗಳಲ್ಲಿಯೇ ಅತೀ ದುಬಾರಿ ಈ ಮಿಯಾಜಾಕಿ ಮಾವಿನ ಹಣ್ಣು. ಜಪಾನ್ ಈ ತಳಿಯನ್ನು ಬೆಳೆಯುತ್ತಿದೆ. ಈ ಮಾವಿನ ಹಣ್ಣಿನ ಪ್ರತಿ ಕೆಜಿಗೆ ಸುಮಾರು 2.7ಲಕ್ಷ ರೂ.ಗಳು ಆಗಿದ್ದು, ಮೇಳದಲ್ಲಿ ಒಂದು ಹಣ್ಣನ್ನು 10 ಸಾವಿರ ರೂ.ಗಳಿಗೆ ಮಾರಾಟ ಮಾಡಲಾಗಿದೆ.

ಜಪಾನ ತಾಳಿಯಾದ ಮಿಯಜಾಕಿಯನ್ನು ಮಹಾರಾಷ್ಟ್ರದ ರತ್ನಗಿರಿಯಿಂದ ತಂದಿರುವುದಾಗಿ ರೈತ ಪ್ರಮೋದ ಗಾಂವ್ಕರ್ ಅವರು ಹೇಳಿದ್ದಾರೆ.

ಸುಮಾರು 7 ಸಾವಿರಕ್ಕೂ ಹೆಚ್ಚು ಮಾವಿನ ಗಿಡಗಳನ್ನು ಬೆಳೆಸುತ್ತಿದ್ದು ಅದರಲ್ಲಿ ಈ ಮಿಯಾಜಾಕಿ ಸೇರಿದಂತೆ ವಿವಿಧ ಮಾವಿನ ತಳಿಗಳನ್ನು ಬೆಳೆಯುತಿದ್ದೇನೆ ಎಂದು ತಿಳಿಸಿದ್ದಾರೆ.

ಮರವು ಸ್ಥಳೀಯ ಹವಾಮಾನಕ್ಕೆ ಚೆನ್ನಾಗಿ ಹೊಂದಿಕೊಳ್ಳುವುದರಿಂದ ಯಾವುದೇ ಸಮಸ್ಯೆಗಳಿಲ್ಲ. ಮರವು ಪ್ರತಿ ಋತುವಿಗೆ ಗರಿಷ್ಠ 14 ಹಣ್ಣುಗಳನ್ನು ನೀಡುತ್ತದೆ. ಇತ್ತೀಚೆಗೆ ಸುಮಾರು 2.5 ಲಕ್ಷ ರೂ.ಗೆ ಹತ್ತಾರು ಮಾವಿನ ಹಣ್ಣು ಮಾರಾಟವಾಗಿತ್ತು. ಅಪರೂಪದ ಹಣ್ಣಾಗಿರುವುದರಿಂದ ಆರೋಗ್ಯಕ್ಕೆ ಲಾಭದಾಯಕವಾಗಿರುವ ಕಾರಣ ಬೆಲೆ ಹೆಚ್ಚಾಗಿದೆ ಎಂದರು,

ಈ ಮಾವಿನ ಹಣ್ಣನ್ನು ಕೊಪ್ಪಳದ ಗ್ರಾಹಕರೊಬ್ಬರಿಗೆ ಪ್ರತಿ ಹಣ್ಣಿಗೆ 10 ಸಾವಿರ ರೂ.ರಂತೆ ಮಾರಾಟ ಮಾಡಿದ್ದೇನೆ. ರಾಜ್ಯದಲ್ಲಿ ಕೆಲವೇ ಖರೀದಿದಾರರು ಲಭ್ಯವಿದ್ದಾರೆ. ಹಣ್ಣಿನಲ್ಲಿ ಪೌಷ್ಟಿಕಾಂಶ ಸಮೃದ್ಧವಾಗಿದೆ ಮತ್ತು ವಿಟಮಿನ್ ಎ, ಬಿ ಮತ್ತು ಸಿ ಇದೆ. ಹಣ್ಣು ಚರ್ಮಕ್ಕೂ ಒಳ್ಳೆಯದು. ಸುರಕ್ಷತೆಯ ಬಗ್ಗೆ ಚಿಂತಿಸಿ ಈ ಮಾವಿನ ಹಣ್ಣುಗಳ ಬೆಲೆ ಮತ್ತು ಲಭ್ಯತೆಯನ್ನು ಬಹಿರಂಗಪಡಿಸಿಲ್ಲ. ಇತರ ಬೆಳೆಗಾರರಿಗೆ ಶಿಕ್ಷಣ ನೀಡಲು ಮೇಳದಲ್ಲಿ ಒಂದು ಹಣ್ಣನ್ನು ಪ್ರದರ್ಶಿನಕ್ಕಿಡಲಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT