ಜೆಡಿಎಸ್‌ ವರಿಷ್ಠ ಎಚ್‌ಡಿ ದೇವೇಗೌಡ 
ರಾಜ್ಯ

HD Devegowda Birthday: ಜನ್ಮದಿನ ಆಚರಿಸದಿರಲು ದೇವೇಗೌಡ ನಿರ್ಧಾರ, NDA ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಸೂಚನೆ!

ರಾಜಕೀಯ ಮತ್ತು ವೈಯುಕ್ತಿಕ ಕಾರಣಗಳಿಂದಾಗಿ ಈ ವರ್ಷ ತಮ್ಮ ಜನ್ಮದಿನಾಚರಣೆ ಆಚರಣೆ ಮಾಡದಿರಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಿರ್ಧರಿಸಿದ್ದು, NDA ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಅಭಿಮಾನಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ರಾಜಕೀಯ ಮತ್ತು ವೈಯುಕ್ತಿಕ ಕಾರಣಗಳಿಂದಾಗಿ ಈ ವರ್ಷ ತಮ್ಮ ಜನ್ಮದಿನಾಚರಣೆ ಆಚರಣೆ ಮಾಡದಿರಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ನಿರ್ಧರಿಸಿದ್ದು, NDA ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಅಭಿಮಾನಿಗಳಿಗೆ ಸೂಚನೆ ನೀಡಿದ್ದಾರೆ.

ಹೌದು.. ಇದೇ ಮೇ 18ರಂದು ಎಚ್ ಡಿ ದೇವೇಗೌಡ ಅವರು 92ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳು ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರು ಯಾರೂ ಶುಭಾಶಯ ಕೋರಲು ಮನೆಗೆ ಆಗಮಿಸದಂತೆ ಸೂಚಿಸಿದ್ದು, ತಾವುಗಳು ಇರುವ ಸ್ಥಳದಿಂದಲೇ ನನ್ನನ್ನು ಹರಸಿ ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ದೇವೇಗೌಡ ಅವರು, 'ಅಭಿಮಾನಿಗಳು ಹಾಗೂ ಜಾತೃತೀತ ಜನತಾದಳ ಪಕ್ಷದ ಕಾರ್ಯಕರ್ತರಲ್ಲಿ ನನ್ನ ವಿನಂತಿ. ಇದೇ ತಿಂಗಳ 18 ರಂದು ನಾನು 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಪದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ ತಾವೆಲ್ಲರೂ ಇದ್ದಲ್ಲಿಯೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಅಂತೆಯೇ ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ. (ಎನ್‌.ಡಿ.ಎ) ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕೋರುತ್ತೇನೆ. ನಿಮ್ಮೆಲ್ಲರ ವಿಶ್ವಾಸಕ್ಕೆ ಆಭಾರಿಯಾಗಿದ್ದೇನೆ ಎಂದು ದೇವೇಗೌಡರು ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ಮೊಮ್ಮಗ ಪ್ರಜ್ವಲ್ ರೇವಣ್ಣರ ಸೆಕ್ಸ್ ಹಗರಣ ಪ್ರಕರಣದಿಂದ ದೇವೇಗೌಡರ ಕುಟುಂಬ ಸಾಕಷ್ಟು ಮುಜುಗರಕ್ಕೊಳಗಾಗಿದ್ದು, ಈ ಪ್ರಕರಣ ರಾಜ್ಯದಲ್ಲಿ ಮಾತ್ರವಲ್ಲದೇ ದೇಶಾದ್ಯಂತ ವ್ಯಾಪಕ ಚರ್ಚೆಗೆ ಒಳಗಾಗಿದ್ದು, ಈ ವರೆಗೂ ದೇವೇಗೌಡರು ಈ ಪ್ರಕರಣ ಸಂಬಂಧ ಬಹಿರಂಗ ಹೇಳಿಕೆ ನೀಡಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT