ಡೆಂಗ್ಯೂ ಜ್ವರ 
ರಾಜ್ಯ

ನಗರದಲ್ಲಿ ಡೆಂಗ್ಯೂ ಹೆಚ್ಚಳ: 13 ದಿನಗಳಲ್ಲಿ 172 ಕೇಸ್ ಪತ್ತೆ, ಪ್ರತಿ ವಾರ್ಡ್‌ಗೆ 4 ಔಷಧ ಸಿಂಪಡಣೆ ತಂಡ ನಿಯೋಜನೆ!

ಮಳೆ ಆರಂಭವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗುತ್ತಿದ್ದು, ಮೇ 1ರಿಂದ 13ರವರೆಗೆ ಒಟ್ಟು 172 ಡೆಂಗೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಬೆಂಗಳೂರು: ಮಳೆ ಆರಂಭವಾಗುತ್ತಿದ್ದಂತೆಯೇ ನಗರದಲ್ಲಿ ಡೆಂಗ್ಯೂ ಭೀತಿ ಹೆಚ್ಚಾಗುತ್ತಿದ್ದು, ಮೇ 1ರಿಂದ 13ರವರೆಗೆ ಒಟ್ಟು 172 ಡೆಂಗೆ ಪ್ರಕರಣಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಬಿಬಿಎಂಪಿ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಪೂರ್ವ ವಲಯದ ರಾಮಸ್ವಾಮಿಪಾಳ್ಯದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌ ಕಿಶೋರ್‌ ಅವರು, ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ವಾರ್ಡ್‌ಗಳಲ್ಲಿ ಸೊಳ್ಳೆ ನಿಯಂತ್ರಣ ಕುರಿತು ಅರಿವು ಮೂಡಿಸುವ ಜತೆಗೆ ಔಷಧ ಸಿಂಪಡಣೆ ಮಾಡಲಾಗುತ್ತಿದೆ ಎಂದು ಹೇಳಿದರು.

ಮಳೆ ಬಂದಾಗ ನೀರು ಸಂಗ್ರಹವಾಗಿ ಸೊಳ್ಳೆಗಳ ಸಂತತಿ ಜಾಸ್ತಿಯಾಗಲಿದ್ದು, ಫಾಗಿಂಗ್‌ ಮತ್ತು ಔಷಧ ಸಿಂಪಡಣೆ ಮೂಲಕ ನಿಯಂತ್ರಿಸಬೇಕಿದೆ. ಹೂವಿನ ಕುಂಡಗಳು, ಬಿಸಾಡಿದ ಟೈರ್‌ಗಳು, ನೀರು ಸಂಗ್ರಹ ತೊಟ್ಟಿ, ನೀರಿನ ಬಾಟಲಿ ಸೇರಿದಂತೆ ಇತರೆಡೆ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಹೀಗಾಗಿ, ಇಂತಹ ಕಡೆ ನೀರು ಸಂಗ್ರಹವಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪ್ರತಿಯೊಂದು ವಾರ್ಡ್‌ನಲ್ಲಿ 4 ಔಷಧಿ ಸಿಂಪಡಣೆ ಮಾಡುವ ತಂಡಗಳನ್ನು ನಿಯೋಜನೆ ಮಾಡಿದ್ದು, ತಾತ್ಕಾಲಿಕವಾಗಿ ನೀರು ನಿಲ್ಲುವ ಸ್ಥಳ ಹಾಗೂ ಶಾಶ್ವತವಾಗಿ ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಫಾಗಿಂಗ್‌ ಮತ್ತು ಔಷಧಿ ಸಿಂಪಡಣೆ ಮಾಡಲಾಗುತ್ತದೆ ಎಂದರು.

ಡೆಂಗ್ಯೂ ನಿಯಂತ್ರಿಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ವಾರ್ಡ್‌ ಮಟ್ಟದಲ್ಲಿ ಜಾಗೃತಿ ಜಾಥಾ ಹಾಗೂ ಕಸದ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜತೆಗೆ, ಮನೆ- ಮನೆಗೆ ಡೆಂಗೆ ನಿಯಂತ್ರಣ ಕುರಿತ ಭಿತ್ತಿಪತ್ರಗಳನ್ನು ವಿತರಿಸಿ, ಪಾಲಿಸಬೇಕಾದ ಕ್ರಮಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಈಡಿಸ್‌, ಈಜಿಪ್ಟೈ ಎಂಬ ಸೊಳ್ಳೆಗಳಿಂದ ಡೆಂಗೆ ರೋಗ ಹರಡುತ್ತದೆ. ಆ ಸೊಳ್ಳೆಗಳು ತೆರೆದಿಟ್ಟ ನೀರಿನ ತೊಟ್ಟಿಗಳು, ಏರ್‌ ಕೂಲರ್‌ಗಳು, ಹೂವಿನ ಕುಂಡದ ತಟ್ಟೆಗಳು, ಬಕೆಟ್‌ಗಳು, ಸಿಮೆಂಟ್‌ ತೊಟ್ಟಿಗಳು, ತೆಂಗಿನ ಚಿಪ್ಪುಗಳು, ಒಡೆದ ಟೈರ್‌ಗಳಲ್ಲಿ ಉತ್ಪತ್ತಿಯಾಗುತ್ತವೆ. ಹೀಗಾಗಿ, ಪ್ರಾರಂಭಿಕ ಹಂತದಲ್ಲೇ ಸೊಳ್ಳೆಗಳ ನಿಯಂತ್ರಣಕ್ಕೆ ಲಾರ್ವಾ ಉತ್ಪತ್ತಿ ತಾಣಗಳನ್ನು ಗುರುತಿಸಿ ನಾಶಪಡಿಸಲಾಗುತ್ತಿದೆ ಎಂದು ಹೇಳಿದರು.

ಕೊಳಚೆ ಹಾಗೂ ಇನ್ನಿತರೆ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ನಮ್ಮ ಕ್ಲಿನಿಕ್‌ಗಳ ವೈದ್ಯರ ತಂಡಗಳು ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ, ಸಿಬ್ಬಂದಿ ತಂಡಗಳನ್ನು ರಚಿಸಿ, ಮನೆ-ಮನೆಗೆ ಭೇಟಿ ನೀಡಿ ಡೆಂಗೆ ಪ್ರಕರಣಗಳ ಪತ್ತೆಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ

ದೆಹಲಿಯಲ್ಲಿ ಹೈಡ್ರಾಮಾ: ವಿಮಾನ ನಿಲ್ದಾಣದಲ್ಲಿ ಬಂಧನಕ್ಕೊಳಗಾಗಿದ್ದ CJP ನಾಯಕರಾದ ದೀಪ್ಕೆ, ರಾಂಕಾ, ದಾಸ್ ಕೊನೆಗೂ ಬಿಡುಗಡೆ, 1 ವರ್ಷ ಶಾಂತಿ ಕಾಪಾಡುವಂತೆ ಷರತ್ತು..!

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!