ಸಾವಿಗೀಡಾದ ವಿದ್ಯಾರ್ಥಿನಿ ಹರ್ಷಿತಾ  
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಬ್ಬ ಯುವತಿ ಅನುಮಾನಾಸ್ಪದ ಸಾವು: ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವ ಪತ್ತೆ!

ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಇಂಜಿನಿಯರಿಂಗ್​ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18ವ) ಮೃತದೇಹ ಪತ್ತೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಸರಣಿ ಹತ್ಯೆ, ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿದೆ. ಹುಬ್ಬಳ್ಳಿಯ ನೇಹಾ ಹಿರೇಮಠ್, ಅಂಜಲಿ ಅಂಬಿಗೇರ, ಕೊಡಗಿನ ಎಸ್​ಎಲ್​ಸಿ ವಿದ್ಯಾರ್ಥಿನಿ ಮೀನಾ ಕೊಲೆ, ನಿನ್ನೆ ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿದ್ದ ಯುವತಿ ಶವ ಪ್ರಕರಣ ಬೆನ್ನಲ್ಲೇ ಬೆಂಗಳೂರಿನ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.

ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಇಂಜಿನಿಯರಿಂಗ್​ ಕಾಲೇಜಿನ ವಸತಿ ನಿಲಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಹರ್ಷಿತಾ (18ವ) ಮೃತದೇಹ ಪತ್ತೆಯಾಗಿದೆ.

ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಬೆಂಗಳೂರು ಹೊರವಲಯ ಚಂದಾಪುರ ಸಮೀಪದ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್​ ಪದವಿ ಓದುತ್ತಿದ್ದಳು. ಕಾಲೇಜಿನ ವಸತಿ ನಿಲಯದಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದಳು.

ಇಂದು ನಡೆದಿದ್ದೇನು?: ಇಂದು ಬೆಳಗ್ಗೆ ಎಷ್ಟು ಹೊತ್ತಾದರೂ ಹರ್ಷಿತಾ ಕೋಣೆಯಿಂದ ಹೊರಬಂದಿರಲಿಲ್ಲ. ಪಕ್ಕದ ಕೋಣೆಯಲ್ಲಿದ್ದ ಪ್ರಗತಿ ಎಂಬ ವಿದ್ಯಾರ್ಥಿನಿ ಹರ್ಷಿತಾ ಇದ್ದ ಕೋಣೆಯ ಬಾಗಿಲನ್ನು ಸಾಕಷ್ಟು ಸಾರಿ ಬಡಿದರೂ ಪ್ರತಿಕ್ರಿಯೆ ಬರಲಿಲ್ಲ. ಅನುಮಾನಗೊಂಡ ಪ್ರಗತಿ ಸ್ಟೂಲ್​ ಮೇಲೆ ಹತ್ತಿ, ಕಿಟಕಿಯಿಂದ ಇಣುಕಿ ನೋಡಿದಾಗ ಹರ್ಷಿತಾ ನೇಣು ಬಿಗಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾಳೆ. ಕೂಡಲೆ ಪ್ರಗತಿ ಅಕ್ಕ-ಪಕ್ಕದ ಕೋಣೆಯಲ್ಲಿದ್ದ ಸಹಪಾಠಿಗಳಿಗೆ ವಿಷಯ ತಿಳಿಸಿದಳು. ಬಳಿಕ ಎಲ್ಲರೂ ಸೇರಿ ಬಾಗಿಲು ಮುರಿದು ಹರ್ಷಿತಾ ಕೋಣೆಯೊಳಗಡೆ ಹೋಗಿ, ಆಕೆಯನ್ನು ನೇಣು ಕುಣಿಕೆಯಿಂದ ಕೆಳಗೆ ಇಳಿಸಿ ಆಸ್ಪತ್ರೆಗೆ ಕರೆದೊಯ್ಯುವ ಹೊತ್ತಿಗೆ ಹರ್ಷಿತಾ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT