ಸಂಸದ ತೇಜಸ್ವಿ ಸೂರ್ಯ  
ರಾಜ್ಯ

Hate Speech case: Tejasvi Surya ವಿರುದ್ಧ FIR ಗೆ ಹೈಕೋರ್ಟ್‌ ತಡೆ; ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಕಾರ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ಬೆಂಗಳೂರಿನ ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿತ್ತು.

ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಮತ್ತು ದೀಪಂಕರ್‌ ದತ್ತ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಲು ನಿರಾಕರಿಸಿದೆ.

ಅರ್ಜಿದಾರರು ಏಕೆ ಮೊದಲಿಗೆ ಹೈಕೋರ್ಟ್‌ ಕದತಟ್ಟಿಲ್ಲ ಎಂದು ಪೀಠ ಪ್ರಶ್ನಿಸಿದ್ದು, ''ಪ್ರತಿಯೊಬ್ಬರು ಸುಪ್ರೀಂ ಕೋರ್ಟ್‌ಗೆ ಓಡಿ ಬರುತ್ತಾರೆ. ನಾವು ನೋಟಿಸ್‌ ಜಾರಿ ಮಾಡಿದರೆ ನಾವೇನಾದರೂ ನಿಲುವು ತೆಗೆದುಕೊಳ್ಳುತ್ತೇವೆಯೇ? ಅದು ಮಧ್ಯಂತರ ನಿಲುವಷ್ಟೇ ಅಗುತ್ತದೆ. ನೀವೇಕೆ ಹೈಕೋರ್ಟ್‌ಗೆ ಹೋಗಿಲ್ಲ” ಎಂದು ನ್ಯಾಯಾಲಯವು ಪ್ರಶ್ನಿಸಿತು.

ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ವಕೀಲ ಶಾದನ್‌ ಫರಾಸತ್‌ ಅವರು ಅರ್ಜಿ ಹಿಂಪಡೆಯುವುದಾಗಿ ಹೇಳಿದ್ದರಿಂದ ನ್ಯಾಯಾಲಯವು ಅದನ್ನು ಪುರಸ್ಕರಿಸಿತು. ಮಾರ್ಚ್‌ 22ರಂದು ಹೈಕೋರ್ಟ್‌ ಮಾಡಿದ್ದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ನ್ಯಾಯಾಲಯ ನಡೆಸಿತು. ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ಪೀಠ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಿತ್ತು.

ಏನಿದು ಪ್ರಕರಣ?

ಆಜಾನ್ ಪ್ರಾರ್ಥನೆ ವೇಳೆ ಹನುಮಾನ್‌ ಚಾಲೀಸಾ ಹಾಡು ಹಾಕಿದರು ಎಂದು ಆರೋಪಿಸಿ ಕೆಲ ಯುವಕರು ಬೆಂಗಳೂರು ನಗರದ ನಗರತ್ ಪೇಟೆಯ ವ್ಯಾಪಾರಿ ಮುಕೇಶ್‌ನ ಮೇಲೆ ಗಂಭೀರ ಹಲ್ಲೆ ನಡೆಸಿದ್ದರು ಎನ್ನುವ ಆರೋಪ ಕೇಳಿಬಂದಿತ್ತು. ಇದರ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡಲಾಗಿದೆ ಎಂದು ಆರೋಪಿಸಿ ತೇಜಸ್ವಿ ಸೂರ್ಯ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 153ಎ, 295ಎ ಹಾಗೂ ಪ್ರಜಾಪ್ರತಿನಿಧಿ ಕಾಯಿದೆ ಸೆಕ್ಷನ್‌ 123(3ಎ) ಅಡಿ ಬೆಂಗಳೂರಿನ ಹಲಸೂರು ಗೇಟ್‌ ಠಾಣೆಯಲ್ಲಿ 20.03.2024ರಂದು ಪ್ರಕರಣ ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ