ಸಂಚಾರ ನಿಯಮ ಉಲ್ಲಂಘಿಸಿದ ಕೆಎಸ್ಆರ್'ಟಿಸಿ ಬಸ್ ಚಾಲಕ.
ರಾಜ್ಯ

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ KSRTC ಬಸ್ ಚಾಲಕ ಮೊಬೈಲ್‌ನಲ್ಲಿ ಮಾತು: ಸಂಸ್ಥೆ ಗಮನಕ್ಕೆ ತಂದ ADGP

ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು: ಮೈಸೂರು–ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ರಾಜ್ಯ ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಆಗ್ರಹಿಸಿದ್ದಾರೆ.

ಚಾಲಕನ ಅಜಾಗರೂಕ ಹಾಗೂ ಅಶಿಸ್ತಿನ ನಡವಳಿಕೆ ಕುರಿತು ಅಲೋಕ್ ಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ನಮ್ಮ ಎಲ್ಲ ಸಿಸಿಟಿವಿಗಳು ಅವುಗಳ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುತ್ತಿವೆ. ಮೇ 11 ರಂದು ಚನ್ನಪಟ್ಟಣ ಬಳಿ ಕೆಎಸ್‌ಆರ್‌ಟಿಸಿ ಚಾಲಕ ಮೊಬೈಲ್‌ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದಾರೆ ಎಂದು ಫೋಟೊ ಸಮೇತ ಮಾಹಿತಿ ಹಂಚಿಕೊಂಡಿದ್ದಾರೆ.

ಹೈವೇನಲ್ಲಿ ನಮ್ಮ ಪೊಲೀಸ್ ಕ್ಯಾಮೆರಾಗಳು ತಮ್ಮ ಕೆಲಸ ಮಾಡುತ್ತಿವೆ. ಕೇವಲ 15 ದಿನದಲ್ಲಿ 12,192 ಸಂಚಾರ ನಿಯಮ ಉಲ್ಲಂಘನೆಗಳನ್ನು ಸೆರೆ ಹಿಡಿದಿವೆ. ಸಂಚಾರ ನಿಯಮ ಉಲ್ಲಂಘನೆಯಿಂದ ಅಪಘಾತವಾದರೆ ಅದನ್ನು ಕುಟುಂಬದವರು ಸಹಿಸಿಕೊಳ್ಳಲು ಸಾಧ್ಯವೇ? ಒಮ್ಮೆ ಯೋಚಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಅಲ್ಲದೆ, ಕೆಎಸ್‌ಆರ್‌ಟಿಸಿ ಚಾಲಕನ ವಿರುದ್ಧ ಸಂಸ್ಥೆ ಕ್ರಮ ಕೈಗೊಳ್ಳಬೇಕು ಎಂದು ಬಸ್‌ನ ವಿವರ ಹಾಗೂ ದಂಡದ (ರೂ.1,500) ವಿವರಗಳನ್ನು ಅಲೋಕ್ ಕುಮಾರ್ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ಕಾರಿನಲ್ಲಿ ಮೊಬೈಲ್‌ನಲ್ಲಿ ಮಾತನಾಡುತ್ತಾ ಹೋಗುತ್ತಿರುವ ಇತರ ಕೆಲವರ ಫೋಟೊಗಳನ್ನೂ ಹಂಚಿಕೊಂಡಿದ್ದಾರೆ.

ಈ ಮೂಲಕ ಯಾವುದೇ ಸಂಚಾರ ಉಲ್ಲಂಘನೆಗಳನ್ನೂ ನಾವು ಸಹಿಸುವುದಿಲ್ಲ ಎಂದು ಅವರು ವಾಹನ ಸವಾರರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಅಲೋಕ್ ಕುಮಾರ್ ಅವರ ಈ ಆಗ್ರಹಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರತಿಕ್ರಿಯೆ ನೀಡಿದ್ದು, ಸಲಹೆಗಾಗಿ ಧನ್ಯವಾದಗಳು ಸರ್, ನಿಯಮ ಉಲ್ಲಂಘಿಸಿದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಡಿಪೋ ಮತ್ತು ವಿಭಾಗಕ್ಕೆ ಸೂಚಿಸಲಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT