ಸಿದ್ದರಾಮಯ್ಯ - ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಪ್ರಧಾನಿ ಮೋದಿ ದಕ್ಷಿಣ-ಉತ್ತರ ಭಾರತದ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು ಉತ್ತರ ಮತ್ತು ದಕ್ಷಿಣ ಭಾರತದ ಜನರ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಯ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು ಉತ್ತರ ಮತ್ತು ದಕ್ಷಿಣ ಭಾರತದ ಜನರ ನಡುವೆ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ದಕ್ಷಿಣದ ರಾಜ್ಯಗಳಲ್ಲಿ ಚುನಾವಣೆ ಮುಗಿದಿದೆ ಎಂಬ ಕಾರಣಕ್ಕೆ, ಕೃತಜ್ಞತೆಯಿಲ್ಲದ ಪ್ರಧಾನಿ ಈಗ ದಕ್ಷಿಣದ ರಾಜ್ಯಗಳ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ದಕ್ಷಿಣ ಮತ್ತು ಉತ್ತರ ಭಾರತದ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ' ಎಂದು ಬರೆದಿದ್ದಾರೆ.

‘ನಾವು ಕರ್ನಾಟಕವನ್ನು ಭಾರತದ ಮಗಳು ಎಂದು ಪರಿಗಣಿಸುತ್ತೇವೆ, ಭಾರತವು ಯಾರ ಮೇಲೂ ಭೇದಭಾವ ಮಾಡಿಲ್ಲ. ಆದರೆ, ಮೋದಿಯಂತಹವರು ವಿಷ ಉಗುಳುತ್ತಿದ್ದಾರೆ. ನಾವು ಪ್ರತಿ ರಾಜ್ಯದ ಜನರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದೇವೆ ಮತ್ತು ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ’ ಎಂದು ಸಿದ್ದರಾಮಯ್ಯ ಹೇಳಿದರು.

ಲೋಕಸಭೆ ಚುನಾವಣೆಯ ನಂತರ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಿಂಧೆ ಅವರು ನಮ್ಮ ಸರ್ಕಾರದ ಪತನದ ಬಗ್ಗೆ ಮಾತನಾಡುವ ಬದಲು ತಮ್ಮ ಸರ್ಕಾರವನ್ನು ಪತನವಾಗದಂತೆ ರಕ್ಷಿಸಿಕೊಳ್ಳಬೇಕು. ಶಿಂಧೆ ಅವರ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ. ಕರ್ನಾಟಕದಲ್ಲಿ ರಾಜಕೀಯ ವಾತಾವರಣ ಕಾಂಗ್ರೆಸ್‌ಗೆ ಅನುಕೂಲಕರವಾಗಿದೆ ಎಂದು ಹೇಳಿದರು.

ಬೇರೆ ರಾಜ್ಯಗಳಲ್ಲಿ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಅವರು, ಪ್ರಚಾರಕ್ಕೆ ಆಹ್ವಾನ ಬಂದಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT