ಅಂಜಲಿ ನಿಂಬಾಳ್ಕರ್ ಮತ್ತು ರಶ್ಮಿಕಾ ಮಂದಣ್ಣ 
ರಾಜ್ಯ

ಬೂಟ್ ನೆಕ್ಕುವುದನ್ನು ನಿಲ್ಲಿಸಿ, ಮೆಗಾಸ್ಟಾರ್ ಆಗಲು ಇದು ನಿಮಗೆ ಸಹಾಯ ಮಾಡಲ್ಲ: ರಶ್ಮಿಕಾಗೆ ಅಂಜಲಿ ತಿರುಗೇಟು

ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (ಮುಂಬೈ ಟ್ರಾನ್ಸ್‌ ಹಾರ್ಬರ್‌ ಲಿಂಕ್‌) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ಬೆಂಗಳೂರು: ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ದೇಶದ ಉದ್ದದ ಸಮುದ್ರ ಸೇತುವೆ ಅಟಲ್‌ ಸೇತು (ಮುಂಬೈ ಟ್ರಾನ್ಸ್‌ ಹಾರ್ಬರ್‌ ಲಿಂಕ್‌) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಪ್ರಶಂಸೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದರು.

ರಶ್ಮಿಕಾ ಮಂದಣ್ಣ ಟ್ವೀಟ್ ಗೆ ಪ್ರಧಾನಿ ನರೇಂದ್ರ ಮೋದಿ ಕೂಡ ಪ್ರತಿಕ್ರಿಯಿಸಿ ಮೆಚ್ಚುಗೆ ವ್ಯಕ್ತ ಪಡಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದ ನಟಿ ರಶ್ಮಿಕಾ ವಿರುದ್ಧ ಕಾಂಗ್ರೆಸ್ ನಾಯಕಿ ಅಂಜಲಿ ನಿಂಬಾಳ್ಕರ್ ಕಿಡಿ ಕಾರಿದ್ದಾರೆ. ಬುಲೆಟ್ ರೈಲಿನ ಬಗ್ಗೆ ಏನಾದರೂ ಹೇಳಲು ಇದ್ಯಾ ಎಂದು ಪ್ರಶ್ನಿಸಿರುವ ಅಂಜಲಿ ನಿಂಬಾಳ್ಕರ್ , ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ ದುರಂತ. ಬೂಟ್ ನೆಕ್ಕುವುದನ್ನು ನಿಲ್ಲಿಸಿ. ಮೆಗಾಸ್ಟಾರ್ ಮಾಡಲು ಇದು ನಿಮಗೆ ಸಹಾಯ ಮಾಡುವುದಿಲ್ಲ ಎಂದು ಪೋಸ್ಟ್‌ ಮಾಡಿದ್ದಾರೆ. ಕಾಂಗ್ರೆಸ್ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ.

ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ ಇಳಿದಿದೆ. ಯೋಚಿಸಿದರೆ ಅಸಾಧ್ಯ ಎನಿಸುತ್ತದೆ. ಅದನ್ನು ಸಾಧಿಸಿ ತೋರಿಸಿದ್ದಾರೆ. ಗೋವಾದಿಂದ ಮುಂಬೈಗೆ, ಬೆಂಗಳೂರಿನಿಂದ ಮುಂಬೈ ರಸ್ತೆ ಹಾಗೂ ಇನ್ನಿತರೆ ಮೂಲಸೌಕರ್ಯಗಳು ಅಭಿವೃದ್ಧಿಯಾಗುತ್ತಿರುವ ರೀತಿ ನೋಡಿದರೆ ಹೆಮ್ಮೆ ಎನಿಸುತ್ತದೆ ಎಂದು ನಟಿ ಮಾತನಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆಗೆ ಭಾರತ ಆಹ್ವಾನಿಸಲಿ: ಪಾಕಿಸ್ತಾನ ಸಚಿವ ಮುಸಾದಿಕ್ ಮಲಿಕ್

Haryana: ಸೇನಾ ತರಬೇತಿ ವೇಳೆ ಭೀಕರ ದುರಂತ: ಟ್ಯಾಂಕ್ ಹರಿದು ಇಬ್ಬರು ಯೋಧರು ಸಾವು

Bisleri ನೀರು ಕೂಡ ಅಸುರಕ್ಷಿತ; ಅಪಾಯಕಾರಿ ರಾಸಾಯನಿಕಗಳಿದ್ದು ಕ್ಯಾನ್ಸರ್ ಕಾರಕ; ಕಾನೂನು ಕ್ರಮಕ್ಕೆ FSSAI ಅನುಮತಿ!

'ರಾಮಾಯಣ' ಸಂಗೀತಕ್ಕಾಗಿ 3 ವರ್ಷ ಮೀಸಲು; 10-12 ಸಿನಿಮಾಗಳ ಆಫರ್ ತಿರಸ್ಕರಿಸಿದ್ದೆ: ಎ.ಆರ್. ರೆಹಮಾನ್

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮರಕ್ಕೆ ಕಾರು ಡಿಕ್ಕಿ; 8 ಮಂದಿ ಸಾವು; ಸಿಎಂ ವಿಜಯ್ ಸಂತಾಪ!