ರಾಮನಗರ: ಹಾಸನದಲ್ಲಿ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ಮೃತಪಟ್ಟ ಘಟನೆ ಬೆನ್ನಲ್ಲೇ ರಾಮನಗರ ತಾಲೂಕಿನಲ್ಲಿ ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಶುಕ್ರವಾರ ನಡೆದಿದೆ.
ರಾಮನಗರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಬೆಟ್ಟದ ಮೇಲಿರುವ ತಗ್ಗು ಪ್ರದೇಶದಲ್ಲಿ ಮಕ್ಕಳು ಈಜಲು ತೆರಳಿದ್ದರು. ಈ ವೇಳೆ ಮೂವರು ಬಾಲಕರು ನೀರುಪಾಲಾಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಮತ್ತು ಆಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಮಕ್ಕಳ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.