ಸಂಗ್ರಹ ಚಿತ್ರ 
ರಾಜ್ಯ

ಎಸಿ ಘಟಕದಲ್ಲಿ ಬೆಂಕಿ ಶಂಕೆ: 175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಬರುತ್ತಿದ್ದ AI ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ!

175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಬೆಂಗಳೂರು: 175 ಪ್ರಯಾಣಿಕರ ಹೊತ್ತು ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಹವಾ ನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

175 ಪ್ರಯಾಣಿಕರನ್ನು ಹೊತ್ತ ದೆಹಲಿಯಿಂದ ಸಂಜೆ 5 ಗಂಟೆ 52 ನಿಮಿಷಕ್ಕೆ ಏರ್‌ ಇಂಡಿಯಾ AI807 ವಿಮಾನ ಟೇಕಾಫ್‌ ಆಗಿತ್ತು. ಸಂಜೆ 6 ಗಂಟೆ 12 ನಿಮಿಷದ ವೇಳೆ ವಿಮಾನದ ಎಸಿ ಯುನಿಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಏರ್‌ ಟ್ರಾಫಿಕ್‌ ಕಂಟ್ರೋಲರ್‌ಗೆ ಮಾಹಿತಿ ನೀಡಿದ ಪೈಲೆಟ್‌ಗಳು, ತುರ್ತು ಲ್ಯಾಂಡಿಂಗ್‌ಗೆ ಮನವಿ ಮಾಡಿದ್ದಾರೆ. ಬಳಿಕ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಅಧಿಕಾರಿಗಳು, ವಿಮಾನ ಲ್ಯಾಂಡಿಂಗ್‌ ಮಾಡಲು ಅವಕಾಶ ನೀಡಿದ್ದಾರೆ.

ಬಳಿಕ ಸಂಭವನೀಯ ಅನಾಹುತ ತಡೆಯಲು ಮೂರು ಅಗ್ನಿ ಶಾಮಕ ವಾಹನಗಳನ್ನು ಸಜ್ಜುಗೊಳಿಸಿದರು. ಸಂಜೆ 6 ಗಂಟೆ 40ನಿಮಿಷಕ್ಕೆ ವಿಮಾನ ಸುರಕ್ಷಿತವಾಗಿ ಲ್ಯಾಂಡ್‌ ಆಯಿತು. ವಿಮಾನದಲ್ಲಿದ್ದ ಎಲ್ಲಾ 175 ಪ್ರಯಾಣಿಕರು ಸುರಕ್ಷಿತವಾಗಿದ್ದು, ಪರ್ಯಾಯ ವಿಮಾನದ ಮೂಲಕ ಬೆಂಗಳೂರಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಯಿತು.

ಏರ್‌ ಇಂಡಿಯಾ ವಿಮಾನದ ಎ.ಸಿ ಯೂನಿಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು 6.15ರ ಸುಮಾರಿಗೆ ಕರೆ ಬಂತು. ಕೂಡಲೇ ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದವು. ವಿಮಾನವನ್ನು ಲ್ಯಾಂಡ್‌ ಮಾಡುತ್ತಲೇ ಕೂಲಂಕಷವಾಗಿ ಪರಿಶೀಲನೆ ನಡೆಸಲಾಯಿತು. ಲ್ಯಾಂಡ್‌ ಆಗುತ್ತಲೇ ಕೆಲ ಹೊತ್ತಿನಲ್ಲಿಯೇ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಲಾಯಿತು. ಅದೃಷ್ಟವಶಾತ್‌, ಯಾರಿಗೂ ತೊಂದರೆಯಾಗಿಲ್ಲ ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT