ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಟೆಕ್ ಪಾರ್ಕ್‌ಗಳು ಮತ್ತು ಬಿಲ್ಡರ್‌ಗಳ ವಿರುದ್ಧ ಚಾಟಿ ಬೀಸಿದೆ. ಪ್ಲಾಸ್ಟಿಕ್ ತ್ಯಾಜ್ಯವನ್ನು ಮಳೆನೀರು ಚರಂಡಿಗೆ (ಎಸ್‌ಡಬ್ಲ್ಯೂಡಿ) ಸುರಿದಿದ್ದಕ್ಕೆ ಮತ್ತು ಎರಡು ವಿಭಿನ್ನ ಸ್ಥಳಗಳಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಿ ಪ್ರಚಾರದ ಬ್ಯಾನರ್‌ಗಳನ್ನು ಹಾಕಿದ್ದಕ್ಕಾಗಿ ತಲಾ 50,000 ರೂಪಾಯಿ ದಂಡ ವಿಧಿಸಿದೆ.
ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣೆಯ ಜಂಟಿ ಆಯುಕ್ತ ಆರ್.ಪ್ರತಿಭಾ ಅವರ ಪ್ರಕಾರ, ಇಕೋ ಸ್ಪೇಸ್ ಟೆಕ್ ಪಾರ್ಕ್‌ನ ಅಧಿಕಾರಿಗಳು ರೆಡ್‌ಹ್ಯಾಂಡ್ ಆಗಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಮಳೆನೀರಿನ ಚರಂಡಿಗೆ ಎಸೆಯುತ್ತಿದ್ದಾರೆ. ಹೀಗಾಗಿ ಬಿಬಿಎಂಪಿ ಮಾರ್ಷಲ್‌ಗಳು ಮತ್ತು ಎಂಜಿನಿಯರ್‌ಗಳು ಬುಧವಾರ ಟೆಕ್ ಪಾರ್ಕ್‌ಗೆ 50,000 ರೂಪಾಯಿ ದಂಡ ವಿಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ನಿಷೇಧಿತ ಪ್ಲಾಸ್ಟಿಕ್‌ನಿಂದ ಮಾಡಿದ ಬ್ಯಾನರ್‌ಗಳನ್ನು ಹಾಕಿದ್ದಕ್ಕಾಗಿ ಮತ್ತೊಂದು ರಿಯಲ್ ಎಸ್ಟೇಟ್ ಸಂಸ್ಥೆ ಕಾಸಾ ಬ್ಲಾಂಕಾ ವಿರುದ್ಧ ಬಿಬಿಎಂಪಿ ತಂಡ 50,000 ರೂ. ವಿಧಿಸಿದೆ ಎಂದು ತಿಳಿಸಿದ್ದಾರೆ.
ಟೆಕ್ ಪಾರ್ಕ್ ಮತ್ತು ಬಿಲ್ಡರ್ ವಿರುದ್ಧ ಬಿಬಿಎಂಪಿಯ ಕ್ರಮವು ಪಾಲಿಕೆಯ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಪ್ರಬಲ ಸಂದೇಶವನ್ನು ರವಾನಿಸಿದೆ, ವಿಶೇಷವಾಗಿ ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು ತಿಳಿಸುತ್ತದೆ ಎಂದು ಪ್ರತಿಭಾ ಹೇಳಿದರು.
ಬಿಬಿಎಂಪಿ ಅಧಿಕಾರಿಗಳ ತಂಡವು ಆರ್‌ಆರ್ ನಗರ, ದಾಸರಹಳ್ಳಿ ಮತ್ತು ಬೊಮ್ಮನಹಳ್ಳಿ ವಲಯಗಳಲ್ಲಿನ ಸ್ಥಳಗಳು ಮತ್ತು ಕೈಗಾರಿಕೆಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ತಯಾರಿಕೆಯನ್ನು ಪರಿಶೀಲಿಸುತ್ತದೆ.ದಾಳಿಗಳ ಸಮಯದಲ್ಲಿ, ಕಾರ್ಖಾನೆ ಪರವಾನಗಿ ಪಡೆದಿರುವುದು ಕಂಡುಬಂದರೆ, ನಾವು 50,000 ರೂ. ದಂಡವನ್ನು ವಿಧಿಸುವುದರ ಜೊತೆಗೆ ಟ್ರೇಡ್ ಲೈಸೆನ್ಸ್ ಅನ್ನು ರದ್ದುಗೊಳಿಸಲು ಶಿಫಾರಸು ಮಾಡುತ್ತೇವೆಎಂದು ಘನತ್ಯಾಜ್ಯ ನಿರ್ವಹಣೆ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.