ಬಂಧಿತ ಆರೋಪಿ 
ರಾಜ್ಯ

ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್: ಮೈಸೂರಿನ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ!

ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ ಆರೋಪಿ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಮೈಸೂರಿನ ಮಹಾರಾಜ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಮೈಸೂರು: ಹುಬ್ಬಳ್ಳಿಯ ಅಂಜಲಿ ಹತ್ಯೆ ಪ್ರಕರಣ ಆರೋಪಿ ವಿಶ್ವನಾಥ್ ಅಲಿಯಾಸ್ ಗಿರೀಶ್ ಸಾವಂತ್ ಮೈಸೂರಿನ ಮಹಾರಾಜ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ತಂದೆಗೆ ವಯಸ್ಸಾಗಿದ್ದು, ಅವರನ್ನು ನೋಡಿಕೊಳ್ಳುವ ಸಲುವಾಗಿ ವಿನಾಯಕ ನರ್ಸಿಂಗ್ ಕೇರ್ ಸರ್ವೀಸ್ ಮೂಲಕ ವಿಶ್ವನಾಥ್ ಅವರನ್ನು ನೇಮಿಸಿಕೊಳ್ಳಲಾಗಿತ್ತು ಎಂದು ಹೋಟೆಲ್ ಮಾಲೀಕ ಗೋವರ್ಧನ್ ಅವರು ಹೇಳಿದ್ದಾರೆ.

ತಂದೆಯನ್ನು ನೋಡಿಕೊಳ್ಳುವ ಸಲುವಾಗಿ ಆತನನ್ನು ನೇಮಿಸಿಕೊಳ್ಳಲಾಗಿತ್ತು. ಆತ ಒಂದೂವರೆ ತಿಂಗಳು ಕೆಲಸ ಮಾಡಿದ. ನಂತರ ಆತ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ನಮ್ಮ ಹೋಟೆಲ್'ನಲ್ಲಿ ರೂಮ್ ಬಾಯ್ ಹಾಗೂ ಸಪ್ಲೈಯರ್ ಆಗಿ ಕೆಲಸ ಮಾಡಲು ಅವಕಾಶ ನೀಡಲಾಗಿತ್ತು. ತಾಯಿಗೆ ಅನಾರೋಗ್ಯ ಎಂದು ಆಗಾಗ್ಗೆ ಊರಿಗೆ ಹೋಗುತ್ತಿದ್ದ. ಸರಿಯಾಗಿ ಕೆಲಸಕ್ಕೆ ಬರುತ್ತಿರಲಿಲ್ಲ. ಹೋಟೆಲ್ ಫೋನ್ ಹಾಗೂ ಸಿಬ್ಬಂದಿಗಳ ಮೊಬೈಲ್ ಫೋನ್ ತೆಗೆದುಕೊಂಡು ಫೋನ್ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ 1000 ರೂಪಾಯಿ ತೆಗೆದುಕೊಂಡಿದ್ದ. ನಂತರ ರೂ.5000 ಮುಂಗಡವಾಗಿ ಸಾಲ ಪಡೆದಿದ್ದ. ಹಣವನ್ನು ಹಿಂತಿರುಗಿಸಬೇಕೆಂದು ಮರಳಿ ಕೆಲಸಕ್ಕೆ ಬಂದಿರಲಿಲ್ಲ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಕೆಲ ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಆರೋಪಿ ತನ್ನ ಪ್ರೇಮ ನಿವೇದನೆಗೆ ಸಹಕರಿಸುತ್ತಿಲ್ಲ ಎಂದು ಸಿಟ್ಟಿನಿಂದ ಆಕೆಯ ಮನೆಯೊಳಗೆ ನುಗ್ಗಿ ಚಾಕುವಿನಿಂದ ಮನಸೋ ಇಚ್ಛೆ ತಿವಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಹುಬ್ಬಳ್ಳಿ ಪೊಲೀಸರು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ಆರೋಪಿ ದಾವಣಗೆರೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಅಂಜಲಿಯನ್ನು ಹತ್ಯೆಗೈದ ಬಳಿಕ ಆರೋಪಿ ಬೆಂಗಳೂರು ಮೂಲಕ ರೈಲಿನಲ್ಲಿ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಎಂದುಕೊಂಡಿದ್ದಾನೆ. ಆದರೆ, ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಾಹಿತಿ ಸಿಕ್ಕ ಹುಬ್ಬಳ್ಳಿ ಪೊಲೀಸರು ದಾವಣಗೆರೆಯಲ್ಲಿ ಆತನನ್ನು ಬಂಧಿಸಲು ಸಕಲ ಸಿದ್ಧತೆ ನಡೆಸಿದ್ದರು. ಆತನ ಬಂಧನಕ್ಕೆ ಯತ್ನಿಸುವ ವೇಳೆ ರೈಲಿನಿಂದ ಜಿಗಿದು ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ, ಈ ವೇಳೆ ರೈಲಿನಿಂದ ಬಿದ್ದ ರಭಸಕ್ಕೆ ಆತನ ಮುಖ ಮತ್ತು ತಲೆಗೆ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT