ಹೆಚ್ ಡಿ ದೇವೇಗೌಡ  
ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ; ನಮ್ಮ ಕುಟುಂಬ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ: ಹೆಚ್ ಡಿ ದೇವೇಗೌಡ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಹೆಚ್​​​ಡಿ ದೇವೇಗೌಡರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ದೇವೇಗೌಡರ 91ನೇ ಹುಟ್ಟುಹಬ್ಬ. ಆ ಪ್ರಯುಕ್ತ ಬೆಂಗಳೂರಿನಲ್ಲಿ ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗಿ ಅರ್ಚನೆ ಮಾಡಿಸಿದ ಬಳಿಕ ಹೊರಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಮ್ಮ ಕುಟುಂಬದ ವಿರುದ್ಧ ರಾಜಕೀಯ ಕುತಂತ್ರ ನಡೆದಿದೆ. ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ. ಪ್ರಜ್ವಲ್ ಪ್ರಕರಣ ಬಗ್ಗೆ ಕುಮಾರಸ್ವಾಮಿ ಇಡೀ ಕುಟುಂಬದ ಪರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್​ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ ಎಂದರು.

ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್​ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ, ಘಟನೆ ಬಗ್ಗೆ ಈ ನೆಲದ ಕಾನೂನಿನ ಚೌಕಟ್ಟಿನಡಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲು ಹೋಗಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ ಎಂದಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ 100 ಕೋಟಿ ಆಫರ್ ಮಾಡಿದ್ದರು ಎಂಬ ದೇವರಾಜೇಗೌಡ ಹೇಳಿಕೆಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದೂ ಅವರು ಹೇಳಿದರು. ದೇವರಾಜೇಗೌಡ ಏನು ಹೇಳಿದ್ದಾರೆಂದು ಮಾಧ್ಯಮದಲ್ಲಿ ನೋಡಿದ್ದೇವೆ. ಎಲ್ಲದಕ್ಕೂ ಕುಮಾರಸ್ವಾಮಿ ಉತ್ತರ ಕೊಟ್ಟಿದ್ದಾರೆ. ಯಾವುದೇ ವಿಚಾರ ಬಂದರೂ ಹೋರಾಟ ಮಾಡುವ ಛಲ ಇದೆ. ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ಕಡೆ ನಾನು ಪ್ರಚಾರ ಮಾಡಿದ್ದೇನೆ. ಜೂನ್ 4ರಂದು ಚುನಾವಣಾ ಫಲಿತಾಂಶ ಬಳಿಕ ನಿಮ್ಮನ್ನು ಭೇಟಿ ಮಾಡುತ್ತೇನೆ. ನಂತರ ಎಲ್ಲಾ ವಿಷಯದ ಬಗ್ಗೆ ಮಾತನಾಡುತ್ತೇನೆ ಎಂದರು.

ರೇವಣ್ಣನವರಿಗೆ ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದೆ, ಇನ್ನೊಂದು ನಾಡಿದ್ದು ವಿಚಾರಣೆಯಿದೆ, ಈ ವಿಚಾರದಲ್ಲಿ ಏನು ಬೆಳವಣಿಗೆ ಆಗಿದೆ ಎಂದು ರಾಜ್ಯದ ಜನತೆ ನೋಡುತ್ತಿದ್ದಾರೆ. ಪ್ರಜ್ವಲ್ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಿ ಎಂದರು.

33 ವರ್ಷದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ.ಇದು ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಆಡಳಿತಾರೂಢ ಕಾಂಗ್ರೆಸ್‌ ಮತ್ತು ಬಿಜೆಪಿ-ಜೆಡಿ(ಎಸ್‌) ಜಿದ್ದಾಜಿದ್ದಿಯಲ್ಲಿ ತೊಡಗಿವೆ.

ಪ್ರಜ್ವಲ್ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದು ಇನ್ನೂ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಇಂಟರ್‌ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಆತನನ್ನು ವಾಪಸ್ ಕರೆತರುವ ಪ್ರಯತ್ನ ನಡೆದಿದೆ. ಇನ್ನೊಂದೆಡೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ದೇವೇ ಗೌಡರ 66 ವರ್ಷದ ಪುತ್ರ ಮಾಜಿ ಸಚಿವ ರೇವಣ್ಣ ಅವರು ನ್ಯಾಯಾಲಯದಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ, ಇದರಲ್ಲಿ ಅವರ ಮಗ ಪ್ರಜ್ವಲ್ ಕೂಡ ಆರೋಪಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT