ಹೆಚ್.ಡಿ ದೇವೇಗೌಡ 
ರಾಜ್ಯ

ಇಂದು ಹೆಚ್.ಡಿ ದೇವೇಗೌಡ ಹುಟ್ಟುಹಬ್ಬ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ!

ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.

ದೇವೇಗೌಡರು ಈಗಾಗಲೇ ಮಾಧ್ಯಮಗಳ ಮೂಲಕ, ಕಾರಣಾಂತರಗಳಿಂದ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾವುದೇ ಆಚರಣೆ ಮಾಡದೇ ಇರುವುದರಿಂದ ಎಲ್ಲರೂ ತಾವಿದ್ದಲ್ಲಿಯೇ ಹಾರೈಸಿ ಎಂದು ಮನವಿ ಮಾಡಿದ್ದಾರೆ.

ಈ ನಡುವೆ ಪ್ರಧಾನಿ ಮೋದಿ ಅವರು ಜೆಡಿಎಸ್ ವರಿಷ್ಠ ಎಚ್‌. ಡಿ. ದೇವೇಗೌಡರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಹೆಚ್.ಡಿ.ದೇವೇಗೌಡರಿಗೆ ಅವರ ಜನ್ಮದಿನದಂದು ಶುಭ ಹಾರೈಕೆಗಳು. ಅವರು ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಗಾಗಿ ರಾಜಕೀಯ ವಲಯದಾದ್ಯಂತ ಗೌರವಾನ್ವಿತರಾಗಿದ್ದಾರೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ವಿಚಾರದಲ್ಲಿ ಅವರ ಬದ್ಧತೆ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹಾರೈಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ, ಮಾಜಿ ಪ್ರಧಾನಿಗಳು, ಜನತಾದಳ ( ಜಾತ್ಯತೀತ) ಪಕ್ಷದ ವರಿಷ್ಠರಾದ ಹೆಚ್.ಡಿ ದೇವೇಗೌಡರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ತಮಗೆ ಇನ್ನಷ್ಟು ಕಾಲ ಆಯಸ್ಸು - ಉತ್ತಮ ಆರೋಗ್ಯವನ್ನು ದೇವರು ನೀಡಲಿ, ತಮ್ಮ ಅನುಭವ, ಮಾರ್ಗದರ್ಶನ ಮುಂದೆಯೂ ನಾಡಿಗೆ ದೊರಕಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಟ್ವಿಟ್ ಮಾಡಿ, ಭಾರತ ಗಣರಾಜ್ಯದ 11ನೇ ಪ್ರಧಾನಮಂತ್ರಿಗಳು, Janata Dal Secular ರಾಷ್ಟ್ರೀಯ ಅಧ್ಯಕ್ಷರು, ನನ್ನ ಪೂಜ್ಯ ತಂದೆಯವರಾದ ಶ್ರೀ ಡಾ. ಹೆಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಭಗವಂತ ಅವರಿಗೆ ಇನ್ನಷ್ಟು ಆಯುರಾರೋಗ್ಯ ನೀಡಲಿ ಹಾಗೂ ಅವರ ಮಾರ್ಗದರ್ಶನ, ಜನಸೇವೆ ದೀರ್ಘಕಾಲ ಮುಂದುವರಿಯಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭಾಶಯ ಕೋರಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, “ಹಿರಿಯ ಮುತ್ಸದ್ದಿ ನಾಯಕರು, ಮಾಜಿ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ಹೆಚ್. ಡಿ. ದೇವೇಗೌಡರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಶುಭ ಕೋರಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ. ವಜಯೇಂದ್ರ ಅವರು ಟ್ವೀಟ್ ಮಾಡಿ, ಗೌರವಾನ್ವಿತ ಮಾಜಿ ಪ್ರಧಾನಿಗಳಾದ ಶ್ರೀ ಎಚ್. ಡಿ. ದೇವೇಗೌಡ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರ ಸುಧೀರ್ಘ ರಾಜಕೀಯ ಅನುಭವ ಹಾಗೂ ಹೋರಾಟಗಳು ನಾಡಿನ ಹಾಗೂ ದೇಶದ ಇತಿಹಾಸದಲ್ಲಿ ಮಹತ್ವದ ಹೆಜ್ಜೆಗುರುತುಗಳು. ವಯಸ್ಸು ಲೆಕ್ಕಿಸದ ಅವರ ರಾಜಕೀಯ ಕ್ರಿಯಾಶೀಲತೆ ಭವಿಷ್ಯದ ರಾಜಕಾರಣಿಗಳಿಗೆ ಸ್ಫೂರ್ತಿಯ ಸೆಲೆಯಾಗಿದೆ, ಗ್ರಾಮೀಣ ಜನರ ಬಗೆಗಿನ ಅವರ ನೈಜ ಕಾಳಜಿಯ ಕೊಡುಗೆಗಳು ಮಣ್ಣಿನ ಮಕ್ಕಳ ಪಾಲಿಗೆ ಚೈತನ್ಯ ತುಂಬಿದ ಸಮೃದ್ಧತೆಯ ಸಂಕೇತಗಳು. ಭಗವಂತನು ಅವರಿಗೆ ಉತ್ತಮ ಆಯುರಾರೋಗ್ಯ ಕರುಣಿಸಿ, ನಾಡು ಹಾಗೂ ದೇಶದ ಬೆಳವಣಿಗೆಗೆ ಅವರು ಅತ್ಯಮೂಲ್ಯ ಮಾರ್ಗದರ್ಶನ ನೀಡುವಂತಾಗಲಿ ಎಂದು ಪ್ರಾರ್ಥಿಸುವೆ ಎಂದು ಕೋರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT