ಬೆಂಗಳೂರು ನಗರ ಸಂಚಾರ ಪೊಲೀಸರು ಬಿಡುಗಡೆಮಾಡಿರುವ ನಕ್ಷೆ  
ರಾಜ್ಯ

IPL 2024: ಇಂದು ಸಂಜೆ RCB v/s CSK; ಬೆಂಗಳೂರಿನ ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ, ಬಿಗಿ ಭದ್ರತೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶವಿದೆ, ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 (IPL 2024) ಟೂರ್ನಿಯಲ್ಲಿ ಇಂದು ಶನಿವಾರ ಸಂಜೆ 7.30ಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್​ಕಿಂಗ್ಸ್​ (CSK) ನಡುವೆ ಪಂದ್ಯ ನಡೆಯಲಿವೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಸಂಚಾರ ದಟ್ಟಣೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು ಪಂದ್ಯಕ್ಕೆ ತೆರಳುವವರ ವಾಹನ ಪಾರ್ಕಿಂಗ್​ಗೆ ಎಲ್ಲೆಲ್ಲಿ ಅವಕಾಶವಿದೆ, ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಎಂದು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

ಪಾರ್ಕಿಂಗ್ ನಿಷೇಧ: ಇಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ. ಕ್ವೀನ್ಸ್​ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮಾರ್ಕ್ ರಸ್ತೆ, ಕಸ್ತೂರಿ ಬಾ ರೋಡ್, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್ ನಿಷೇಧಿಸಲಾಗಿದೆ.

ಪಾರ್ಕಿಂಗ್​ಗೆ ಅವಕಾಶ: ಪಂದ್ಯ ನೋಡಲು ಆಗಮಿಸುವವರಿಗೆ ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಕಿಂಗ್ಸ್​ ರಸ್ತೆ, ಶಿವಾಜಿನಗರ ಬಸ್ ನಿಲ್ದಾಣ ಮೊದಲನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಬೆಂಗಳೂರು ಸಂಚಾರಿ ಪೊಲೀಸರು ಮೈದಾನದ ಸುತ್ತಮುತ್ತ ಸಂಚಾರ ವಾಹನ ನಿಷೇಧಿಸಿದ್ದಾರೆ.

ಬಿಗಿ ಭದ್ರತೆ: ಪಂದ್ಯ ನಡೆಯುವ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಡಿಸಿಪಿ, 20 ಎಸಿಪಿ, 50 ಇನ್ಸ್ಪೆಕ್ಟರ್ ಸೇರಿದಂತೆ ಒಂದು ಸಾವಿರ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT