ಸಾಂದರ್ಭಿಕ ಚಿತ್ರ 
ರಾಜ್ಯ

SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂನ್​ 14 ರಿಂದ 22 ವರೆಗೆ ಪರೀಕ್ಷೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್​ಎಸ್​​ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್​ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ.

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್​ಎಸ್​​ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್​ 14ರಿಂದ 22ರವರೆಗೆ ಪರೀಕ್ಷೆ ನಡೆಯಲಿದೆ.

ಜೂನ್​​ 7 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದುಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ಮಂಡಳಿಯ ಜಾಲತಾಣ https://kseab.karnataka.gov.in/english ಪ್ರಕಟಿಸಲಾಗಿದೆ.

ವೇಳಾಪಟ್ಟಿ ಹೀಗಿದೆ

ಜೂನ್ 14: ಪ್ರಥಮ ಭಾಷೆ: ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ

ಜೂನ್ 15: ತೃತೀಯ ಭಾಷೆ: ಹಿಂದಿ, ಕನ್ನಡ, ಇಂಗ್ಲಿಷ್, ಪರ್ಷಿಯನ್, ಅರೇಬಿಕ್, ಸಂಸ್ಕೃತ, ಕೊಂಕಣಿ, ಉರ್ದು, ತುಳು, ಮತ್ತು NSQF ವಿಷಯಗಳು

ಜೂನ್ 18: ಗಣಿತ/ಸಮಾಜ ಶಾಸ್ತ್ರ

ಜೂನ್ 19: ಎಲಿಮೆಂಟ್ಸ್​​ ಆಫ್​ ಮೆಕ್ಯಾನಿಕಲ್​ ಇಂಜಿನಿಯರಿಂಗ್​​ IV, ಇಂಜಿನಿಯರಿಂಗ್ ಗ್ರಾಫಿಕ್ಸ್​​2, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್​​ IV, ಎಲಿಮೆಂಟ್ಸ್​ ಆಫ್​ ಎಲೆಕ್ಟ್ರಾನಿಕ್ಸ್​​ ಇಂಜಿನಿಯರಿಂಗ್, ‘ಸಿ’ ನಲ್ಲಿ ಪ್ರೋಗ್ರಾಮಿಂಗ್, ಕಂಪ್ಯೂಟರ್ ಸೈನ್ಸ್​​, ಅರ್ಥಶಾಸ್ತ್ರ

ಜೂನ್ 20: ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ

ಜೂನ್ 21: ದ್ವಿತೀಯ ಭಾಷೆ: ಇಂಗ್ಲಿಷ್, ಕನ್ನಡ

ಜೂನ್ 22: ಸಮಾಜ ವಿಜ್ಞಾನ

ಕಳೆದ ಮೇ 9 ರಂದು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ ಕಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT