ಆರೋಪಿ ಶಿವಕುಮಾರ್ 
ರಾಜ್ಯ

ಬೆಂಗಳೂರು: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣನ ಬಂಧನ!

ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣನನ್ನು ಶನಿವಾರ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಮೊಬೈಲ್ ಚಟಕ್ಕೆ ಬಿದ್ದಿದ್ದ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣನನ್ನು ಶನಿವಾರ ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ನೆರಿಗಾ ಗ್ರಾಮದ ನಿವಾಸಿ ಶಿವಕುಮಾರ್ ಎಂದು ಗುರುತಿಸಲಾಗಿದೆ.

15 ವರ್ಷದ ತನ್ನ ತಮ್ಮ ಪ್ರಾಣೇಶ್ ಮೊಬೈಲ್ ತೆಗೆದುಕೊಂಡು ದಿನವಿಡೀ ಗೇಮ್ ಆಡಿದ್ದಕ್ಕೆ ಆಕ್ರೋಶಗೊಂಡು ಆತನನ್ನು ಕೊಂದಿರುವುದಾಗಿ ಶಿವಕುಮಾರ್ ಸರ್ಜಾಪುರ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾನೆ.

ಪೊಲೀಸರ ಪ್ರಕಾರ, ಬುಧವಾರ ಬಹಿರ್ದೆಸೆಗೆ ತೆರಳಿದ್ದ ಏಳನೇ ತರಗತಿಯ ವಿದ್ಯಾರ್ಥಿ ಪ್ರಾಣೇಶ್ ಶವವಾಗಿ ಪತ್ತೆಯಾಗಿದ್ದಾನೆ.

ಪಾಲಕರು ಮಗನಿಗಾಗಿ ಹುಡುಕಾಟ ಆರಂಭಿಸಿದ ಬಳಿಕ ಶಿವಕುಮಾರ್, ಪ್ರಾಣೇಶ್ ನನ್ನು ಯಾರೋ ಕೊಲೆ ಮಾಡಿರುವುದಾಗಿ ತಿಳಿಸಿದ್ದು, ಶವ ನೋಡಿರುವುದಾಗಿ ಹೇಳಿದ್ದಾನೆ.

ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಸರ್ಜಾಪುರ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ವಿಚಾರಣೆ ವೇಳೆ ಶಿವಕುಮಾರ್ ಹೇಳಿಕೆ ಬದಲಾಯಿಸಿದ್ದಾನೆ. ಘಟನೆಯಲ್ಲಿ ಆತನ ಕೈವಾಡವಿದೆ ಎಂದು ಶಂಕಿಸಿದ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

ಶಿವಕುಮಾರ್ ತನ್ನ ಸಹೋದರ ಪ್ರಾಣೇಶ್‌ನ ತಲೆ ಮತ್ತು ಹೊಟ್ಟೆಯ ಮೇಲೆ ಸುತ್ತಿಗೆಯಿಂದ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ಸುತ್ತಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.

ಆಂಧ್ರದ ಕರ್ನೂಲ್​ನಲ್ಲಿ ಅಜ್ಜಿ ಮನೆಯಲ್ಲೇ ಇದ್ದುಕೊಂಡು ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿದ್ದ ಪ್ರಾಣೇಶ್, ಶಾಲೆಗೆ ಬೇಸಿಗೆ ರಜೆ ಹಿನ್ನೆಲೆ ತಂದೆ ತಾಯಿ ಇದ್ದ ನೆರಿಗಾ ಗ್ರಾಮಕ್ಕೆ ಬಂದಿದ್ದ. ಸಮಯ ಸಿಕ್ಕಾಗಲೆಲ್ಲ ಅಣ್ಣ ಶಿವಕುಮಾರ್​ನ ಮೊಬೈಲ್​ ತೆಗೆದುಕೊಂಡು ಆಟ ಆಡ್ತಿದ್ದ. ಇದು ಶಿವಕುಮಾರ್​ಗೆ ಕೋಪ ತರಿಸಿತ್ತು. ಹೀಗಾಗಿ ಮೇ 15ರಂದು ತಮ್ಮ ಬಹಿರ್ದೆಸೆಗೆ ಹೋದಾಗ ಅವನನ್ನು ಹಿಂಬಾಲಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಪ್ರಾಣೇಶ್​ನ ತಲೆ, ಹೊಟ್ಟೆ ಭಾಗಕ್ಕೆ ಹೊಡೆದು ಕೊಲೆ ಮಾಡಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel