ಬೆಂಗಳೂರು: ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಬಲ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡ ನಂತರ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಿನ್ನೆ ಶನಿವಾರ ನಡೆದಿದೆ.
ವಿಮಾನದಲ್ಲಿ ಬೆಂಗಳೂರಿನಿಂದ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ಇದ್ದರು, ಯಾವುದೇ ಅಪಾಯಗಳಿಲ್ಲದೆ ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದಾರೆ.
ಸಿಬ್ಬಂದಿ ಏರ್ ಟ್ರಾಫಿಕ್ ಕಂಟ್ರೋಲರ್‌ಗೆ ಎಚ್ಚರಿಕೆ ನೀಡಿದ್ದು, ವಿಮಾನ ನಿಲ್ದಾಣದಲ್ಲಿ ಪೂರ್ಣ ಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ರಾತ್ರಿ 11:12ಕ್ಕೆ ತುರ್ತು ಭೂಸ್ಪರ್ಶ ಮಾಡಿದ ಸ್ವಲ್ಪ ಸಮಯದ ನಂತರ, ವಿಮಾನ ನಿಲ್ದಾಣದ ಅಗ್ನಿಶಾಮಕ ಇಂಜಿನ್‌ಗಳಿಂದ ಬೆಂಕಿಯನ್ನು ನಂದಿಸಲಾಯಿತು.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) “ಮೇ 18, 2024 ರಂದು ಬೆಂಗಳೂರಿನಿಂದ ಕೊಚ್ಚಿಗೆ IX 1132 ರಾತ್ರಿ 11:12 ಕ್ಕೆ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿಯಾಗಿದೆ.
ಪೂರ್ಣ-ಪ್ರಮಾಣದ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು, ಲ್ಯಾಂಡಿಂಗ್ ಆದ ತಕ್ಷಣ ಬೆಂಕಿಯನ್ನು ನಂದಿಸಲಾಯಿತು. ಎಲ್ಲಾ 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಗಳನ್ನು ವಿಮಾನದಿಂದ ಯಶಸ್ವಿಯಾಗಿ ಸ್ಥಳಾಂತರಿಸಲಾಯಿತು.