ಬಿಜೆಪಿ ನಾಯಕರ ಪ್ರತಿಭಟನೆಯ ಸಂಗ್ರಹ ಚಿತ್ರ  
ರಾಜ್ಯ

ಸರ್ಕಾರಕ್ಕೆ ಒಂದು ವರ್ಷ: ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ, ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ

ಲೋಕಸಭೆ ಚುನಾವಣೆ-2024 ಅಂತಿಮ ಘಟ್ಟಕ್ಕೆ ತಲುಪುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದೆ. ಒಂದೆಡೆ ನಾಳೆ ಮೇ 20ರಂದು ರಾಜ್ಯ ಸರ್ಕಾರ ಒಂದು ವರ್ಷದ ಸಂಭ್ರಮದಲ್ಲಿದ್ದರೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ರೆಡಿ ಮಾಡಿದ್ದು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದೆ.

ಬೆಂಗಳೂರು: ಲೋಕಸಭೆ ಚುನಾವಣೆ-2024 ಅಂತಿಮ ಘಟ್ಟಕ್ಕೆ ತಲುಪುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವರ್ಷವಾಗುತ್ತಿದೆ. ಒಂದೆಡೆ ನಾಳೆ ಮೇ 20ರಂದು ರಾಜ್ಯ ಸರ್ಕಾರ ಒಂದು ವರ್ಷದ ಸಂಭ್ರಮದಲ್ಲಿದ್ದರೆ ವಿರೋಧ ಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಚಾರ್ಜ್‌ಶೀಟ್ ರೆಡಿ ಮಾಡಿದ್ದು ರಾಜ್ಯಪಾಲರಿಗೆ ದೂರು ನೀಡಲು ಮುಂದಾಗಿದೆ.

ರಾಜ್ಯಾದ್ಯಂತ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಮುಗಿ ಬೀಳುತ್ತಿರುವ ಬಿಜೆಪಿಗರು ಕಾನೂನು ಸುವ್ಯವಸ್ಥೆ ಬಗ್ಗೆಯೂ ಟೀಕೆ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಸರಣಿ ಕೊಲೆ, ಅತ್ಯಾಚಾರ, ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ. ಜನತೆಯ ಬದುಕಿಗೆ ಭದ್ರತೆ ಇಲ್ಲದಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಬಿಜೆಪಿ ಆರೋಪಿಸಿದ್ದು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಮುಂದಾಗಿದೆ.

ರಾಜ್ಯದಲ್ಲಿ ಎಂದೂ ಕಂಡರಿಯದ ಭೀಕರ ಬರಗಾಲ ಬಂದಿದೆ. ಆದರೆ, ಬರ ನಿರ್ವಹಣೆಯಲ್ಲಿ ವಿಫಲವಾಗಿದೆ. ರೈತರಿಗೆ ಪರಿಹಾರವನ್ನು ನೀಡಿಲ್ಲ. ರೈತರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರದ ಹಣವೂ ರೈತರಿಗೆ ತಲುಪುತ್ತಿಲ್ಲ. ಅದನ್ನು ಬ್ಯಾಂಕ್‌ಗಳು ಸಾಲಕ್ಕೆ ಬಳಸಿಕೊಳ್ಳುತ್ತಿವೆ. ಇನ್ನು ಸರ್ಕಾರವು ಒಂದು ವರ್ಷದಲ್ಲಿ ಹೊಸ ಕಾಮಗಾರಿಗಳಿಗೆ ಗುದ್ದಲಿ ಪೂಜೆಯನ್ನೂ ಮಾಡಿಲ್ಲ.

ಇಷ್ಟಲ್ಲದೆ ಶಾಸಕರ ಪರಿಸ್ಥಿತಿ ಇನ್ನೂ ಕಷ್ಟಕರವಾಗಿದೆ. ಶಾಸಕರಿಗೆ ಅನುದಾನ ಕೊಡಲು ಹಣವಿಲ್ಲ. ಅನುದಾನ ಕೊಡುತ್ತೇವೆ, ಕೊಡುತ್ತೇವೆ ಎಂದೇ ದಿನ ದೂಡುತ್ತಿದೆ ಎಂದು ಸ್ವಪಕ್ಷೀಯ ಶಾಸಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದನ್ನು ಜನರ ಮುಂದಿಡಲು ಬಿಜೆಪಿ ಮುಂದಾಗಿದೆ.

ರಾಜ್ಯ ಸರ್ಕಾರದ ಮೇಲೆ ಮಾಡಲಾಗುವ ಎಲ್ಲ ಆರೋಪಗಳ ಪಟ್ಟಿಯನ್ನು ಒಂದು ಪುಸ್ತಕ ರೂಪದಲ್ಲಿ ತರಲು ಬಿಜೆಪಿ ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇದನ್ನು ದೊಡ್ಡ ಮಟ್ಟದಲ್ಲಿ ಅಭಿಯಾನವನ್ನಾಗಿ ಕೈಗೊಳ್ಳಲು ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲರ ಬಳಿಗೆ ನಿಯೋಗ: ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ನಿಯೋಗ ನಾಳೆ ರಾಜ್ಯಪಾಲರಿಗೆ ದೂರು ಸಲ್ಲಿಸಲು ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT