ಆತ್ಮಹತ್ಯೆ online desk
ರಾಜ್ಯ

ಐಪಿಎಲ್​ ಬೆಟ್ಟಿಂಗ್‌: ಲಕ್ಷ ಲಕ್ಷ ಹಣ ಕಳೆದುಕೊಂಡ ಯುವಕ ನೇಣಿಗೆ ಶರಣು!

ಐಪಿಎಲ್​ ಬೆಟ್ಟಿಂಗ್‌ದಂಧೆಯಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ.

ರಾಯಚೂರು: ಐಪಿಎಲ್​ ಬೆಟ್ಟಿಂಗ್‌ದಂಧೆಯಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ನಡೆದಿದೆ.

ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಆತ್ಮಹತ್ಯೆಗೆ ಶರಣಾದ ಯುವಕ. ಈತ ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದ. ಆದರೆ ಬೆಟ್ಟಿಂಗ್‌ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಲಾಡ್ಜ್‌ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್‌ ಸಿಬ್ಬಂದಿ ಒಳಹೊಕ್ಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ವಚನಾನಂದಶ್ರೀ ವಿರುದ್ಧದ Pocso ಪ್ರಕರಣ: ತನಿಖಾಧಿಕಾರಿ PSI ಮಂಜುಳಾ ದಿಢೀರ್ ವರ್ಗಾವಣೆ!

ಮಾನವೀಯತೆ ಮರೆತ ಜನ: ಜನನಿಬಿಡ ರಸ್ತೆಯಲ್ಲೇ ಯುವ ದಂಪತಿ ಮೇಲೆ ಭೀಕರ ಹಲ್ಲೆ; Video Viral ಆದ ನಂತರ ಆಕ್ರೋಶ!

ಹೈಕೋರ್ಟ್ ನಲ್ಲೂ Umar Khalid ಗೆ ಹಿನ್ನಡೆ: ಅನಾರೋಗ್ಯ ಪೀಡಿತ ತಾಯಿ, ಜಾಮೀನು ಅರ್ಜಿ ವಜಾ!

Sex Video ಪ್ರಕರಣ: ಸ್ವಯಂ ಘೋಷಿತ ದೇವಮಾನವ ಖರತ್‌ ಈಗ ED ವಶಕ್ಕೆ; 70 ಕೋಟಿ ರೂ ಅಕ್ರಮ ಹಣ ವರ್ಗಾವಣೆ ಆರೋಪ!

SCROLL FOR NEXT