ಶಿವರಾಮೇಗೌಡ 
ರಾಜ್ಯ

ಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ: ಪೊಲೀಸರಿಂದ ಭದ್ರತೆ

ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.

ನಿನ್ನೆ ತಡರಾತ್ರಿ ಕಾರಿನಲ್ಲಿ ಬಂದ ವ್ಯಕ್ತಿಗಳಿಂದ ಮೊಟ್ಟೆ ಎಸೆತ ನಡೆದಿದೆ ಎಂದು ವರದಿಗಳು ತಿಳಿಸಿವೆ ಕಾರಿನಲ್ಲಿ ಬಂದ ಐದಾರು ಮಂದಿ, ಮನೆಯ ಮುಂದಿದ್ದ ಪೊಲೀಸರನ್ನು ಕಂಡು ಪೊಲೀಸರ ಕಣ್ತಪ್ಪಿಸಿ ಐದಾರು ಮೊಟ್ಟೆ ಎಸೆದು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.

ಮೊಟ್ಟೆ ಎಸೆಯಲು ಯತ್ನಿಸಿ ಪರಾರಿ ಆದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಸಿಸಿಟಿವಿ ವಿಷ್ಯುವಲ್ಸ್ ಆಧರಿಸಿ ಹುಡುಕಾಟ ನಡೆಸಿದ್ದಾರೆ. ಮೊಟ್ಟೆ ಎಸೆತದ ಬಳಿಕ ಎಲ್ಆರ್‌ಎಸ್ ಮನೆ ರಸ್ತೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.

ಪೆನ್ ಡ್ರೈವ್ ಪ್ರಕರಣ ವಿಚಾರದಲ್ಲಿ ವಕೀಲ ದೇವರಾಜೇಗೌಡ ಜೊತೆ ಮಾತನಾಡುವಾಗ ಜೆಡಿಎಸ್ ವರಿಷ್ಠ ದೇವೇಗೌಡ ಅವರ ಬಗ್ಗೆ ಶಿವರಾಮೇಗೌಡ ಅವರು ಅವಹೇಳನಕಾರಿ ಮಾತನಾಡಿದ್ದರು ಎಂದು ವರದಿಯಾಗಿದೆ. ಈ ಕುರಿತ ಆಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧನ್ಕರ್ ವಿಚಾರವಾಗಿ ಎಚ್ಚೆತ್ತ NDA: ನೂತನ ಉಪರಾಷ್ಟ್ರಪತಿಗಳ ಕಾರ್ಯದರ್ಶಿಯಾಗಿ ಪ್ರಧಾನಿ ಮೋದಿ ಸಲಹೆಗಾರ ಅಮಿತ್ ಖರೆ ನೇಮಕ!

Asia Cup 2025: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಬ್ಯಾಟಿಂಗ್ ಆಯ್ಕೆ, ಟಾಸ್ ವೇಳೆ ನಾಯಕರ ಹಸ್ತಲಾಘವವಿಲ್ಲ!

Cut Crude oil: ಟ್ರಂಪ್ ಒತ್ತಡದ ಬೆನ್ನಲ್ಲೇ ಕಚ್ಚಾ ತೈಲ, ಅನಿಲ ಆಮದು ಕಡಿತಕ್ಕೆ ಕೇಂದ್ರ ಮುಂದು: ಪ್ರಧಾನಿ ಮೋದಿ ಹೇಳಿದ್ದೇನು?

Assam: ಕಾಂಗ್ರೆಸ್ ನಿಂದ ಪಾಕ್ ಉಗ್ರರಿಗೆ ಬೆಂಬಲ, ನುಸುಳುಕೋರರ ರಕ್ಷಣೆ: ಪ್ರಧಾನಿ ಮೋದಿ ಆರೋಪ! Video

ಸೀಟು ಹಂಚಿಕೆಗೂ ಮುನ್ನ ಬಿಹಾರದಲ್ಲಿ ಇಂಡಿ ಕೂಟಕ್ಕೆ ಏನಾಯ್ತು: ಎಲ್ಲಾ 243 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸುವುದಾಗಿ ಹೇಳಿದ ತೇಜಸ್ವಿ!

SCROLL FOR NEXT