ಎಚ್.ಡಿ. ರೇವಣ್ಣ 
ರಾಜ್ಯ

ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಜಾಮೀನು

ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರು: ಹೊಳೆ ನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ. ತಮ್ಮ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಧ್ಯ ವಯಸ್ಸಿನ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಎಚ್. ಡಿ. ರೇವಣ್ಣ ಅವರಿಗೆ ನಗರದ 24ನೇ ಎಸಿಎಂಎಂ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ.

ಈ ಕುರಿತು ಕಾಯ್ದಿರಿಸಲಾಗಿದ್ದ ಆದೇಶವನ್ನು ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ವಿಚಾರಣೆಯ (42ನೇ ಎಸಿಎಂಎಂ ಕೋರ್ಟ್ ) ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜೆ. ಪ್ರೀತ್ ಅವರು ಪ್ರಕಟಿಸಿದರು. ರೂ. 5 ಲಕ್ಷ ಮೊತ್ತದ ಬಾಂಡ್ ಹಾಗೂ ಇಷ್ಟೇ ಮೊತ್ತರ ಒಬ್ಬರ ಶ್ಯೂರಿಟಿ ಒದಗಿಸುವುದು ಸೇರಿದಂತೆ ಮತ್ತಿತರ ಷರತ್ತುಗಳನ್ನು ವಿಧಿಸಲಾಗಿದೆ.

ಈ ಮೊದಲು ಇದೇ ನ್ಯಾಯಾಲಯ ನೀಡಿದ್ದ ಮಧ್ಯಂತರ ಜಾಮೀನಿಗೆ ಪ್ರಾಸಿಕ್ಯೂಷನ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಅಂತೆಯೇ ಈ ಅರ್ಜಿಯು, ಪರಿಶೀಲನೆಗೆ ಅರ್ಹವೊ ಅಲ್ಲವೋ ಎಂಬ ಆಕ್ಷೇಪದ ಮೇಲಿನ ವಾದ- ಪ್ರತಿವಾದ ಆಲಿಸಿ ಆದೇಶವನ್ನು ಕಾಯ್ದಿರಿಸಿತ್ತು.

ರೇವಣ್ಣ ಮತ್ತು ಅವರ ಪುತ್ರ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 47 ವರ್ಷದ ಮನೆ ಕೆಲಸದಾಕೆ ವಿರುದ್ಧ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಕುರಿತು ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ದೂರು ದಾಖಲಿಸಲಾಗಿತ್ತು.

ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ವಿರುದ್ಧ ಬಂಧನ ವಾರಂಟ್ ಕೂಡ ಹೊರಡಿಸಲಾಗಿದೆ. ಪರಾರಿಯಾಗಿರುವ ಪ್ರಜ್ವಲ್ ವಿರುದ್ಧ ಇಂಟರ್ ಪೋಲ್ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಿದೆ.

ಹೆಚ್.ಡಿ.ರೇವಣ್ಣ ಅವರನ್ನು ಮೇ 4 ರಂದು ಬಂಧಿಸಲಾಗಿತ್ತು. ಬಳಿಕ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಅವರ ನ್ಯಾಯಾಂಗ ಬಂಧನ ಅಂತ್ಯದ ವೇಳೆಗೆ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT