ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಳೆಗೆ ನಾರ್ತ್‌ವುಡ್ ಅಪಾರ್ಟ್‌ಮೆಂಟ್ ಜಲಾವೃತಗೊಂಡಿರುವುದು. 
ರಾಜ್ಯ

ಯಲಹಂಕದಲ್ಲಿ ನರಕ ಸೃಷ್ಟಿಸಿದ ಮಳೆ: ಉಕ್ಕಿ ಹರಿದ ಚರಂಡಿ; ನಾರ್ತ್‌ವುಡ್ ವಿಲ್ಲಾ ನಿವಾಸಿಗಳು ಕಂಗಾಲು!

ಮಳೆಯಿಂದಾಗಿ ಎದುರಾಗುವ ಅನಾಹುತಗಳ ತಡೆಯಲು ಸಜ್ಜಾಗಿದ್ದೇವೆಂದು ಬಿಬಿಎಂಪಿ ಹೇಳುತ್ತಿದೆ. ಆದರೆ, ಕೇವಲ ಕೆಲವೇ ನಿಮಿಷಗಳ ಕಾಲ ಮಳೆ ಸುರಿದರೂ ನಗರದ ಹಲವೆಡೆ ಜಲಾವೃತವಾದ ಬೆಳವಣಿಗೆಗಳು ನಗರದಲ್ಲಿ ಕಂಡು ಬರುತ್ತಿದೆ.

ಬೆಂಗಳೂರು: ಮಳೆಯಿಂದಾಗಿ ಎದುರಾಗುವ ಅನಾಹುತಗಳ ತಡೆಯಲು ಸಜ್ಜಾಗಿದ್ದೇವೆಂದು ಬಿಬಿಎಂಪಿ ಹೇಳುತ್ತಿದೆ. ಆದರೆ, ಕೇವಲ ಕೆಲವೇ ನಿಮಿಷಗಳ ಕಾಲ ಮಳೆ ಸುರಿದರೂ ನಗರದ ಹಲವೆಡೆ ಜಲಾವೃತವಾದ ಬೆಳವಣಿಗೆಗಳು ನಗರದಲ್ಲಿ ಕಂಡು ಬರುತ್ತಿದೆ.

ನಗರದಲ್ಲಿ ಮಳೆ ಪರಿಣಾಮ ಯಲಹಂಕದ ಪುಟ್ಟೇನಹಳ್ಳಿ ಕೆರ ಅಂಚಿನ ರಣಣಶ್ರೀ ಗಾರ್ಡೇನಿಯಾ ಲೇಔಟ್ ಹಾಗೂ ನಾರ್ತ್ ವುಡ್ ಅಪಾರ್ಟ್ ಮೆಂಟ್ ಕಟ್ಟಡ ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮನೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಯಲಹಂಕ ಸೇರಿದಂತೆ ಉತ್ತರ ಬೆಂಗಳೂರು ಭಾಗದಲ್ಲಿ ಶನಿವಾರ ಭಾರೀ ಮಳೆ ಸುರಿದಿತ್ತು. ಮಳೆ ನೀರು ಹರಿದು ಹೋಗಲು ಸೂಕ್ತ ಅವಕಾಶ ಇಲ್ಲದೇ, ಸುಮಾರು ಮೂರು ಅಡಿಗೂ ಹೆಚ್ಚು ಪ್ರಮಾಣದ ನೀರು ಇಡೀ ಪ್ರದೇಶವನ್ನು ಆವರಿಸಿತ್ತು. ರಸ್ತೆ ಹಾಗೂ ಅಪಾರ್ಟ್ ಮೆಂಟ್ ನೆಲಮಹಡಿಯಲ್ಲಿ ನಿಲ್ಲಿಸಲಾಗಿದ್ದ ವಾಹನಗಳು ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದ್ದವು. ಬಿಬಿಎಂಪಿ ಅದಿಕಾರಿಗಳು ಭಾನುವಾರ ಸ್ಥಳಕ್ಕೆ ಭೇಟಿ ನೀಡಿ ನಿಂತ ನೀರನ್ನು ಪಂಪ್ ಬಳಕೆ ಮಾಡಿ ತೆರವುಗೊಳಿಸಿದರು.

ಕಳೆದ ಒಂದು ವಾರದಿಂದ ನೀರು ಶೇಖರಣೆ ಆಗುತ್ತಿದ್ದಂತೆ ಆತಂಕದಲ್ಲಿ ಈಗಾಗಲೇ ಹಲವರು ಮನೆಗಳನ್ನು ಖಾಲಿ ಮಾಡಿಕೊಂಡು ಹೋಗಿದ್ದರು. ಸ್ಥಳೀಯ ನಿವಾಸಿಗಳು ಈ ಬಗ್ಗೆ ವಾರದ ಹಿಂದೆಯೇ ಬಿಬಿಎಂಪಿಗೆ ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಅವಾಂತರ ಸೃಷ್ಟಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪುಟ್ಟೇನಹಳ್ಳಇ ಕೆರೆ ಅರಣ್ಯ ಇಲಾಖೆಯ ಅಧೀನದಲ್ಲಿದೆ. ಬಿಬಿಎಂಪಿಯಿಂದ ಪುಟ್ಟೇನಹಳ್ಳಇ ಕೆರೆಯ ದಂಡೆಯವರೆಗೆ ರಾಜಕಾಲುವೆ ನಿರ್ಮಾಣ ಮಾಡಲಾಗಿದೆ. ಪುಟ್ಟೇನಹಳ್ಳಿ ಕೆರೆಗೆ ರಾಜಕಾಲುವೆ ಸಂಪರ್ಕ ನೀಡಲು 3 ಮೀಟರ್ ಕಾಮಗಾರಿ ಮಾಡಬೇಕು. ಆದರೆ, ರಾಜಕಾಲುವೆಯಲ್ಲಿ ಕೊಳಚೆ ನೀರು ಹರಿದು ಬರುತ್ತಿರುವುದರಿಂದ ಅರಣ್ಯ ಇಲಾಖೆ ಅವಕಾಶ ನೀಡಿಲ್ಲ. ಪಾಲಿಕೆ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳ ಸಮನ್ವಯ ಕೊರತೆಯ ಪರಿಣಾಮ ಜನರು ಸಂಕಷ್ಟಕ್ಕೆ ಒಳಗಾಗಬೇಕಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ನಡುವೆ ಜಲಾವೃತಗೊಂಡ ಮನೆಗಳ ವೀಡಿಯೊಗಳು ವೈರಲ್ ಆದ ನಂತರ ಪಾಲಿಕೆ ಸಿಬ್ಬಂದಿ ಸ್ಳಕ್ಕೆ ಭೇಟಿ ನೀಡಿದರು. ಯಲಹಂಕ ವಲಯ ಆಯುಕ್ತರು ಮತ್ತು ಇಂಜಿನಿಯರ್‌ಗಳು ಬಡಾವಣೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. 15 ಎಚ್‌ಪಿ ಪಂಪ್‌ಗಳನ್ನು ಬಳಸಿ ನಿಂತ ನೀರನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT