ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿ ಬೈಕ್ ಚಲಾಯಿಸುತ್ತಿರುವ ಯುವಕ. 
ರಾಜ್ಯ

ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಬೈಕ್ ಚಾಲನೆ: ಯುವಕ ಬಂಧನ

ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸಿದ್ದ ಸವಾರನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಯುವತಿಯನ್ನು ಪೆಟ್ರೋಲ್ ಟ್ಯಾಂಕ್ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸಿದ್ದ ಸವಾರನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕಾವಲ್ ಬೈರಸಂದ್ರದ ಎಂ.ವಿ.ಲೇಔಟ್ ನಿವಾಸಿ ಸಿಲಂಬರಸನ್ (21) ಬಂಧಿತ ಸವಾರ. ಇತ್ತೀಚೆಗೆ ಬೆಂಗಳೂರು-ಬಳ್ಳಾರಿ ರಸ್ತೆಯಿದ ಹೆಬ್ಬಾಳ ಕಡೆಗೆ ಬರುವಾರ ಸವಾರನೊಬ್ಬ ಪೆಟ್ರೋಲ್ ಟ್ಯಾಂಕ್ ಮೇಲೆ ಯುವತಿಯನ್ನು ಕೂರಿಸಿಕೊಂಡು ಅಪಾಯಕಾರಿಯಾಗಿ ದ್ವಿಚಕ್ರ ವಾಹನ ಚಲಾಯಿಸಿದ್ದು, ಈ ವೇಳೆ ಬೈಕ್ ಹಿಂದೆ ಕಾರಿನಲ್ಲಿದ್ದವರು ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ವಿಡಿಯೋ ನೋಡಿದ ಹೆಬ್ಬಾಳ ಸಂಚಾರ ಪೊಲೀಸರು ಬೈಕಿನ ನೋಂದಣಿ ಸಂಖ್ಯೆ ಆಧರಿಸಿ ಸವಾಲ ಸಿಲಂಬರಸನ್ ನ್ನು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿರುವುದರ ಜೊತೆಗೆ ಸವಾರನ ಚಾಲನಾ ಪರವಾನಗಿ ಅಮಾನತುಗೊಳಿಸಲು ಸಂಬಂಧಪಟ್ಟ ಆರ್'ಟಿಒ ಅಧಿಕಾರಿಗಳಿಗೆ ಶಿಫಾರಸು ಮಾಡಿದ್ದಾರೆ.

ವಾಹನ ಚಾಲನೆ ವೇಳೆ ಸಾರ್ವಜನಿಕರ ಶಾಂತಿಗೆ ಭಂಗ, ಅಜಾಗರೂಕತೆ ಪ್ರದರ್ಶಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಉತ್ತರ ಸಂಚಾರ ವಿಭಾಗದ ಡಿಸಿಪಿ ಡಿ.ಆರ್.ಸಿರಿಗೌರಿ ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್