ಸಾಂದರ್ಭಿಕ ಚಿತ್ರ 
ರಾಜ್ಯ

ನೈಸ್ ರಸ್ತೆಯಲ್ಲಿ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ನಗರದ ಪಶ್ಚಿಮ ಭಾಗದ ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರು: ನಗರದ ಪಶ್ಚಿಮ ಭಾಗದ ನೈಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಪ್ರಯಾಣಿಕ ಗಾಯಗೊಂಡಿರುವ ಘಟನೆ ನಡೆದಿದೆ. ವಿನಾಯಕ್ (20) ಮತ್ತು ಗಿರೀಶ್ (22) ಜಿಗಣಿಯಲ್ಲಿ ಮನೆಯಿಂದ ತುಮಕೂರಿಗೆ ತೆರಳುತ್ತಿದ್ದಾಗ ಮಂಗನಹಳ್ಳಿ ಬಳಿ ವಾಹನ ಡಿಕ್ಕಿ ಹೊಡೆದು ವೇಗವಾಗಿ ಹೋಗಿದೆ. ಇದರಿಂದ ವಿನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಿರೀಶ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಇಬ್ಬರೂ ನಗರದ ಹೊರವಲಯದಲ್ಲಿರುವ ತಾಂತ್ರಿಕ ಸಂಸ್ಥೆಯಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದರು ಎಂದು ಜ್ಞಾನಭಾರತಿ ಸಂಚಾರ ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಿದ್ದರೆ ಪರಿಶೀಲಿಸಲಾಗುವುದು, ಯಾವುದೇ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆಯಲಾಗುವುದು ಎಂದು ಜ್ಞಾನಭಾರತಿ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಅಪಘಾತ ಹೇಗೆ ಸಂಭವಿಸಿತು ಎಂಬುದು ಖಚಿತವಾಗಿಲ್ಲ. ಅವರ ಕೂಡಾ ವೇಗವಾಗಿ ಚಲಿಸುತ್ತಿದ್ದರೆಂಬ ಅನುಮಾನವಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?