ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದ ದೃಶ್ಯಗಳು, ಶೋಭಾ ತೇಲಿ (ಒಳಚಿತ್ರ) 
ರಾಜ್ಯ

ಬೆಳಗಾವಿ: ಲಕ್ಷ್ಮಣ್ ಸವದಿ ಸಹ-ಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮಹಿಳೆ ಸಾವು, ಇಬ್ಬರಿಗೆ ಗಾಯ

ಶೋಭಾ ತೇಲಿ ಮೃತಪಟ್ಟ ಮಹಿಳೆಯಾಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಿಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬೆಳಗಾವಿ: ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಸಹ ಮಾಲಿಕತ್ವದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರ ವಲಯದ ಪ್ರಿಯಾ ಎಕ್ಸ್‌ಪೋರ್ಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟವಾಗಿ ಮೂವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆ ಸಾಗಿಸುವ ಮಾರ್ಗ ಮಧ್ಯ ಓರ್ವ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.

ಶೋಭಾ ತೇಲಿ ಮೃತಪಟ್ಟ ಮಹಿಳೆಯಾಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಿಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಪ್ರಿಯಾ ಎಕ್ಸ್‌ಪೋರ್ಟ್ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಸಾಂಗಲಿ ಉದ್ಯಮಿಯೊಬ್ಬರ ಸಹಭಾಗಿತ್ವದ ಮೆಕ್ಕೆಜೋಳ ಪಾಲಿಷ್ ಮಾಡಿ ಎಕ್ಸ್‌ಪೋರ್ಟ್ ಮಾಡುವ ಕಾರ್ಖಾನೆಯಾಗಿದ್ದು, ಹೈ ಪ್ರೆಶರ್​ನಿಂದ ಬಾಯ್ಲರ್ ಸ್ಪೋಟಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಬ್ಲಾಸ್ಟ್ ಆದ ತೀವ್ರತೆಗೆ ಕಾರ್ಖಾನೆಯ ಗೋಡೆ ಬಿರುಕು ಬಿಟ್ಟಿದ್ದು, ಕೆಲ ಕಾಲ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿ ಶಾಮಕ ಸಿಬ್ಬಂದಿ ಸುದ್ದಿ ತಿಳಿದ ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಅಥಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

SCROLL FOR NEXT