ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ 
ರಾಜ್ಯ

ಕೊಯ್ನಾ ಅಣೆಕಟ್ಟೆಯಿಂದ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಒಪ್ಪಿಗೆ

ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ನೀರು ಬಿಡಲು ಶಿಂಧೆ ಸಮ್ಮತಿ ನೀಡಿದ್ದಾರೆ.

ಬೆಳಗಾವಿ: ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪತ್ರ ಬರೆದಿದ್ದರು.ಇದಾದ ಕೆಲವೇ ದಿನಗಳಲ್ಲಿ ಕರ್ನಾಟಕಕ್ಕೆ ನೀರು ಬಿಡಲು ಶಿಂಧೆ ಸಮ್ಮತಿ ನೀಡಿದ್ದಾರೆ.

ಮಹಾರಾಷ್ಟ್ರದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು ಶೀಘ್ರದಲ್ಲೇ ಕೃಷ್ಣಾ ನದಿಗೆ ನೀರು ಬಿಡಲಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಇದಲ್ಲದೆ, ಸೋಮವಾರ ರಾಯಬಾಗ ತಾಲೂಕಿಗೆ ಭೇಟಿ ನೀಡಿದ ಅವರು ಕೃಷ್ಣಾ ನದಿಯ ಮಟ್ಟವನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಜಾರಕಿಹೊಳಿ ರಾಜ್ಯ ಸರ್ಕಾರ ಎಲ್ಲಾ ಬರಪೀಡಿತ ಪ್ರದೇಶಗಳಿಗೆ ಪರಿಣಾಮಕಾರಿಯಾಗಿ ನೀರು ಸರಬರಾಜು ಮಾಡಲು ಸಾಧ್ಯವಿರುವ ಎಲ್ಲ ಕೆಲಸ ಮಾಡುತ್ತಿದೆ. ಕೊಯ್ನಾ ಅಣೆಕಟ್ಟಿನಿಂದ ರಾಜ್ಯಕ್ಕೆ ನೀರು ಬಿಡಲು ಸಿದ್ದರಾಮಯ್ಯ ಅವರು ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!