ಕುಲುಷಿತ ನೀರು ಸೇವನೆ (ಸಾಂಕೇತಿಕ ಚಿತ್ರ) online desk
ರಾಜ್ಯ

ಮೈಸೂರು: ಕಲುಷಿತ ನೀರು ಸೇವನೆ; ಓರ್ವ ಸಾವು; 48 ಮಂದಿ ಅಸ್ವಸ್ಥ

ಮೈಸೂರಿನಲ್ಲಿ ಕಲುಶಿತ ನೀರು ಸೇವನೆ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥರಾಗಿದ್ದಾರೆ.

ಮೈಸೂರು: ಮೈಸೂರಿನಲ್ಲಿ ಕಲುಶಿತ ನೀರು ಸೇವನೆ ಮಾಡಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 48 ಮಂದಿ ಅಸ್ವಸ್ಥರಾಗಿದ್ದಾರೆ. ಮೈಸೂರಿನ ಸಾಲುಂಡಿ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ. ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ತನಿಖೆ ನಡೆಸಿ, ಆಸ್ಪತ್ರೆಯಲ್ಲಿರುವವರಿಗೆ ಸೂಕ್ತ ಚಿಕಿತ್ಸೆ ಲಭಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕನಕರಾಜ್(20) ಮೃತ ವ್ಯಕ್ತಿಯಾಗಿದ್ದು, ಅಸ್ವಸ್ಥಗೊಂಡು ವಾಂತಿಯಾದ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾರೆ. ಇದೇ ರೋಗಲಕ್ಷಣಗಳನ್ನು ಹೊಂದಿರುವ ಇನ್ನೂ ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಸಿದ್ದರಾಮಯ್ಯ ಅವರು ಸಾವಿನ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ.

ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡು ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ತರ ಆರೋಗ್ಯ ವಿಚಾರಿಸಿದರು. ಸರ್ಕಾರ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಜಲಮಾಲಿನ್ಯಕ್ಕೆ ಕಾರಣವನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!