ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: LPG ಸಿಲಿಂಡರ್ ಸೋರಿಕೆ; ಒಂದೇ ಕುಟುಂಬದ ನಾಲ್ವರ ದುರ್ಮರಣ

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.

ಮೈಸೂರು: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಮೈಸೂರಿನ ಯರಗನಹಳ್ಳಿಯಲ್ಲಿ ನಡೆದಿದೆ.

ಬಟ್ಟೆಗಳ ಐರನ್‌ ಕೆಲಸ ಮಾಡುತ್ತಿದ್ದ ಕುಮಾರಸ್ವಾಮಿ (45), ಮಂಜುಳಾ (39), ಅರ್ಚನಾ (19) ಮತ್ತು ಸ್ವಾತಿ (17) ಮೃತಪಟ್ಟವರು. ಮೇಲ್ನೋಟಕ್ಕೆ ಸಿಲಿಂಡರ್‌ ಸೋರಿಕೆಯಿಂದ ಈ ನಾಲ್ವರು ಉಸಿರುಗಟ್ಟಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.

ಮಕ್ಕಳು ಬೇರೆ ಬೇರೆ ಕಡೆಯಲ್ಲಿ ಮಲಗಿದ್ದರು, ಅಪ್ಪ ಅಮ್ಮ ರೂಮಿನಲ್ಲಿ ಮಲಗಿದ್ದರು, ಕಳೆದ ಎರಡು ದಿನಗಳಿಂದ ಮನೆಯ ಬಾಗಿಲು ತೆರೆದಿರಲಿಲ್ಲ ಕಾಲೇಜಿಗೆ ಬಾರದಿದ್ದ ಕಾರಣ ಸ್ನೇಹಿತರು ಮನೆಗೆ ಬಂದು ನೋಡಿದಾಗ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಎರಡು ದಿನಗಳ ಹಿಂದೆ ಅಂದರೆ ಸೋಮವಾರವೇ ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ, ಕುಟುಂಬವೂ ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಮೂಲದವರಾಗಿದ್ದು, 30 ವರ್ಷದಿಂದಲೂ ಮೈಸೂರಿನಲ್ಲೇ ವಾಸವಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ಕುಟುಂಬಸ್ಥರ ಮದುವೆಗೆ ಹೋಗಿದ್ದ ಈ ಕುಟುಂಬ ಸದಸ್ಯರು ಸೋಮವಾರ ವಾಪಸ್ ಬಂದು ಮನೆಯಲ್ಲೇ ರಾತ್ರಿ ಮಲಗಿದ್ದಾರೆ. ಆದರೆ ಬೆಳಗಾಗುವಷ್ಟರಲ್ಲಿಯೇ ಎಲ್ಲರೂ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಪೊಲೀಸ್‌ ಕಮಿಷನರ್‌ ರಮೇಶ್‌ ಬಾನೋತ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel