ಡಿಜಿಪಿಗೆ ಜೆಡಿಎಸ್ ದೂರು 
ರಾಜ್ಯ

400 ಮಹಿಳೆಯರ ಮೇಲೆ ಪ್ರಜ್ವಲ್ ಮಾಸ್ ರೇಪ್ ಹೇಳಿಕೆ: ಮಹಿಳೆಯರ ತೇಜೋವಧೆ ಎಂದು ರಾಹುಲ್ ಗಾಂಧಿ ವಿರುದ್ಧ JDS ದೂರು!

ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಮಾಸ್ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದರು.

ಬೆಂಗಳೂರು: ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಮಾಸ್ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ಕರ್ನಾಟಕ ಡಿಜಿಪಿ ಅಲೋಕ್ ಮೋಹನ್ ಅವರಿಗೆ ದೂರು ನೀಡಿದೆ.

ಮಾಜಿ ಎಂಎಲ್‌ಸಿ ಮತ್ತು ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಎಚ್‌ಎಂ ರಮೇಶ್ ಗೌಡ ಅವರು ಗಾಂಧಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 202ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕೋರಿದ್ದಾರೆ. ಮೇ 2ರಂದು ಶಿವಮೊಗ್ಗ ಮತ್ತು ರಾಯಚೂರು ಜಿಲ್ಲಾ ಕೇಂದ್ರಗಳಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ ಈ ಹೇಳಿಕೆ ನೀಡಿದ್ದರು.

ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ಮಾಡಿದ್ದಾರೆ. ಇದು ಲೈಂಗಿಕ ಹಗರಣವಲ್ಲ ಮಾಸ್ ರೇಪ್ ಎಂದು ರಾಹುಲ್ ಗಾಂಧಿ ಕರ್ನಾಟಕ ಜನತೆ ಮುಂದೆ ಹೇಳಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಇದೇ ಮಾಹಿತಿಯನ್ನು ಮಾಧ್ಯಮಗಳ ಮುಂದೆಯೂ ನೀಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಹುಲ್‌ ಗಾಂಧಿಗೆ ಎಸ್‌ಐಟಿ ಸಮನ್ಸ್ ಜಾರಿ ಮಾಡಬೇಕು ಎಂದು ಜೆಡಿಎಸ್ ಒತ್ತಾಯಿಸಿದೆ.

ಪ್ರಜ್ವಲ್ 400 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಗಾಂಧಿ ನಿರ್ದಿಷ್ಟ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ, ಅತ್ಯಾಚಾರಕ್ಕೊಳಗಾದ 400 ಮಹಿಳೆಯರ ಮಾಹಿತಿ ಮತ್ತು ವಿವರಗಳು ಅವರಿಗೆ ಗೊತ್ತಿದ್ದೇಯೆ ಅಥವಾ ಉದ್ದೇಶಪೂರ್ವಕವಾಗಿ ವಿವರಗಳನ್ನು ಬಹಿರಂಗಪಡಿಸಲು ವಿಫಲರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!