ಹೋಟೆಲ್ ನಲ್ಲಿ ಪರಿಶೀಲನೆ ನಡೆಸುತ್ತಿರುವ ಪೊಲೀಸರು. 
ರಾಜ್ಯ

ಬೆಂಗಳೂರಿನ 3 ಪ್ರತಿಷ್ಟಿತ ಹೋಟೆಲ್​ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಪೊಲೀಸರ ತಪಾಸಣೆ

ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಬೆಂಗಳೂರು: ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿರುವ ಮೂರು ಹೋಟೆಲ್‌ಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಪ್ರಮುಖ ಒಟೆರಾ ಹೋಟೆಲ್ ಸೇರಿದಂತೆ ನಗರದ ಮೂರು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿವೆ. ಗುರುವಾರ ಬೆಳಗ್ಗೆ ಹೋಟೆಲ್ ಸಿಬ್ಬಂದಿ ಮೇಲ್ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ.

ಇ-ಮೇಲ್ ನೋಡುತ್ತಿದ್ದಂತೆ ಸ್ಥಳೀಯ ಪೊಲೀಸ್ ಇನ್ನಿತರ ಸರ್ಕಾರಿ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ್ದಾರೆ. ಇದರಂತೆ ಸ್ಥಳಕ್ಕೆ ಬಂದ ಪೊಲೀಸರು ಒಟೆರಾ ಹೋಟೆಲ್‌ನಲ್ಲಿ ಅತ್ಯಧಿಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿದರು.

ಬಳಿಕ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಆರಂಂಭಿಸಿದೆ. ಅಧಿಕಾರಿಗಳು ಸಹ ಸ್ಥಳದಲ್ಲಿದ್ದು, ಕೂಲಂಕುಷವಾಗಿ ಪರಿಶೀಲನೆ ನಡೆಸಿದ್ದಾರೆ.

ಬಾಂಬ್ ಬೆದರಿಕೆ ಕುರಿತು ಮಾಹಿತಿ ಪಸರುತ್ತಿದ್ದಂತೆ ಹೋಟೆಲ್‌ಗಳ ಮುಂದೆ, ಕೆಲವು ಗಂಟೆಗಳ ಅನಿಶ್ಚಿತ ಮತ್ತು ಆತಂಕದ ವಾತಾವರಣ ಏರ್ಪಟ್ಟಿತ್ತು. ಬಳಿಕ ಪೊಲೀಸರು ಬಾಂಬ್ ಬೆದರಿಕೆಯನ್ನು ಸುಳ್ಳು ಎಂದು ಘೋಷಿಸಿದರು.

ಹೋಟೆಲ್ ಸಿಬ್ಬಂದಿ ಮತ್ತು ಅತಿಥಿಗಳಿಗೆ ಅಗತ್ಯವಾದ ರಕ್ಷಣೆ, ಘಟನೆ ಬಗ್ಗೆ ಸೂಕ್ತ ಮಾಹಿತಿ ನೀಡಿದರು. ಜೊತೆಗೆ ಈ ಹೋಟೆಲ್‌ಗಳಲ್ಲಿ ಯಾವುದೇ ಸ್ಪೋಟಕ, ಬಾಂಬ್ ನಂತಹ ವಸ್ತುಗಳು ಪತ್ತೆ ಆಗಿಲ್ಲ ಎಂದು ಅಭಯ ನೀಡಿದರು.ನಂತರ ಹೋಟೆಲ್‌ನಲ್ಲಿ ತಂಗಿದ್ದವರು, ಹೋಟೆಲ್ ಸಿಬ್ಬಂದಿ ಮತ್ತು ಮಾಲೀಕರು ನಿಟ್ಟುಸಿರು ಬಿಟ್ಟರು.

ಈ ಸಂಬಂಧ ಆಗ್ನೇಯ ವಿಭಾಗದ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಹಿಂದೆ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಪೋಟಿಸಲಾಗಿತ್ತು. ಅದಾದ ಬಳಿಕ ಇಂತಹ ಹುಸಿ ಬಾಂಬ್ ಬೆದರಿಕೆಗಳು ಹೆಚ್ಚಾಗಿದ್ದು, ಜನರಲ್ಲಿ ಆತಂಕ ಹುಟ್ಟಿಸುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT