ಹೆಚ್ ಡಿ ದೇವೇಗೌಡ 
ರಾಜ್ಯ

ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ಬೇಗ ಬಂದು ಶರಣಾಗು: ಪ್ರಜ್ವಲ್ ರೇವಣ್ಣಗೆ ದೇವೇಗೌಡ ಎಚ್ಚರಿಕೆ

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ.

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಆಗುವಂತೆ ಹಲವು ಬಾರಿ ಸೂಚಿಸಿದರು ಪ್ರಯೋಜನವಾಗಿಲ್ಲ. ಆದರೆ ಇದೀಗ ಅಖಾಡಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಇಳಿದಿದ್ದು ಎಲ್ಲೇ ಇದ್ದರೂ ಕೂಡಲೇ ಭಾರತಕ್ಕೆ ಮರಳುವಂತೆ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಜೆಡಿಎಸ್ ಅಧಿಕೃತ ಪ್ರಕಟಣೆ ಹೊರಡಿಸಿದೆ. ಜನರು ನನ್ನ ಮತ್ತು ನನ್ನ ಕುಟುಂಬದರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು. ಅದರೂ ನಾನು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ.

ಇರಲಿ ಸದ್ಯಕ್ಕೆ ನಾನು ಏನು ಮಾಡಬಹುದು ಎಂದರೆ ಪ್ರಜ್ವಲ್ ಎಲ್ಲಿದ್ದರೂ ಬಂದು, ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸು ಎಂದು ಮುಲಾಜಿಲ್ಲದೆ ಹೇಳಬಲ್ಲೆ. ಇದು ಅವನಿಗೆ ಕೊಡುತ್ತಿರುವ ಕೊನೆಯ ಎಚ್ಚರಿಕೆ. ನೀನು ಮಾಡಿದ್ದೀಯ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ನೀನು ತಲೆಬಾಗದಿದ್ದಲ್ಲಿ ನೀನು ನನ್ನ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ನನ್ನ ಬಗ್ಗೆ ಗೌರವವಿದ್ದರೆ ಕೂಡಲೇ ಬಂದು ಪೊಲೀಸರಿಗೆ ಶರಣಾಗು ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT